ಚಿತ್ರದುರ್ಗ, (ಜೂನ್ 17) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಭರಮಸಾಗರ, ಚಿತ್ರದುರ್ಗ, ಚಳ್ಳಕರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 96 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ ದಿನ. www.anganwadirecruit.kar.nic.in ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು: ಜನನ ಪ್ರಮಾಣ ಪತ್ರ, ಜನ್ಮ ದಿನಾಂಕವಿರುವ ಎಸ್.ಎಸ್‍ಎಲ್.ಸಿ ಅಂಕಪಟ್ಟಿ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ತಹಶೀಲ್ದಾರರು, ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಮೀಸಲಾತಿ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸುವುದು.
ವಿಧವೆಯಾದಲ್ಲಿ ಪತಿಯ ಮರಣ ಪ್ರಮಾಣಪತ್ರ, ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಪತ್ನಿಯೆಂದು ಉಪ ವಿಭಾಗಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ. ವಿಚ್ಛೇದನ ಪ್ರಮಾಣಪತ್ರ, ಇಲಾಖೆಯ ಸುಧಾರಣಾ ಸಂಸ್ಥೆ, ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ. ಯೋಜನಾ ನಿರಾಶ್ರೀತರೆಂಬ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದ ಪ್ರಮಾಣ ಪತ್ರ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಯಾಗಿದ್ದು ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಆಯ್ಕೆಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಬೇಕು.
ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು.
ಭರಮಸಾಗರ-08194-231626, ಚಿತ್ರದುರ್ಗ-08194-235958, ಚಳ್ಳಕೆರೆ-08195-250291, ಹಿರಿಯೂರು-08193-263512, ಹೊಳಲ್ಕೆರೆ-08191-275250, ಮೊಳಕಾಲ್ಮುರು-08198-229535 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.