ಚಿತ್ರದುರ್ಗ. ಜ.01: ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಪೂರ್ಣಗೊಳಿಸಲು 2025ರ ಜ.05 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಕೆ ಕಾಲಾವಧಿ ಮುಕ್ತಾಯಗೊಂಡಿದ್ದು, ಅರ್ಜಿ ಸಲ್ಲಿಸುವಾಗ ವೆಬ್‍ಸೈಟ್‍ನಲ್ಲಿ ಒಟ್ಟು 04 ಹಂತಗಳಿದ್ದು, ಮೊದಲನೇ ಹಂತದಲ್ಲಿ ಆನ್‍ಲೈನ್ ತಂತ್ರಾಂಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಸಹಿ ಅಪ್‍ಲೋಡ್ ಮಾಡುವುದು. ಮೂರನೇ ಹಂತ ತಮ್ಮ ದಾಖಲಾತಿಗಳನ್ನು ಅಪ್‍ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ ತಮ್ಮ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಂಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ಇದರಲ್ಲಿ ಕೆಲವರು ಮೊದಲನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸಸ್‍ಪುಲ್ ಅಪ್‍ಲೋಡ್ ಎಂಬ ಸಂದೇಶ ಅವರುಗಳ ಮೊಬೈಲ್‍ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ.
ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ ಜ.5 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.