Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ವಿಕಲಚೇತನರ ಪುರ್ನವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜ.21: ನಗರದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಕ್ಕೆ ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

18-45 ವರ್ಷಗಳ ವಯೋಮಿತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಫೆ.6 ರ ಒಳಗೆ ಅರ್ಜಿ ಸಲ್ಲಿಸಬಹುದು.  ಫಿಸಿಯೋಥೆರಪಿಸ್ಟ್/ಆಕ್ಯುಪೇಷನಲ್ ಥೆರಪಿಸ್ಟ್, ಪಿ&ಓ ಕೃತಕಾಂಗ ಜೋಡಣೆ ಅಭಿಯಂತರ, ಪ್ರಾಥೋಟಿಸ್ಟ್ & ಆರ್ಥೋಟಿಸ್ಟ್ (ಪಿ & ಓ), ಸ್ಪೀಚ್ ಥರೆಪಿಸ್ಟ್ & ಆಡಿಯಾಲಿಜಿಸ್ಟ್, ಮೊಬಿಲಿಟಿ ಇನ್ಸಟ್ರಕ್ಟರ್, ಇಯರ್ ಮೋಲ್ಡ್ ಟೆಕ್ನಿಷಿಯನ್ ತಲಾ ಒಂದು ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳಿಗೆ ಸಂವಾದಿಯಾಗಿ ಅರ್ಹ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಅರ್ಜಿಯನ್ನು ಸಿದ್ದಪಿಡಿಸಿ, ಮೊಬೈಲ್ ಸಂಖ್ಯೆ ನಮೂದಿಸಿ, ಅಗತ್ಯ ದಾಖಲೆಗಳೊಂದಿಗೆ ಕಾರ್ಯದರ್ಶಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ , ಲೋಕಾಯುಕ್ತ ಕಚೇರಿ ಆವರಣ ಬಿ.ಡಿ.ರಸ್ತೆ ಚಿತ್ರದುರ್ಗ-577501 ಇಲ್ಲಿಗೆ ಸಲ್ಲಿಸತಕ್ಕದ್ದು. ವಿದ್ಯಾರ್ಹತೆ, ಅನುಭವ ಹಾಗೂ ಮಾಸಿಕ ವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08914-220085, ಮೊಬೈಲ್ ಸಂಖ್ಯೆ 9448038400 ಕರೆ ಮಾಡಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment