Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉದ್ಯೋಗ ವಾರ್ತೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಫೆ.10: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೇವದಾಸಿ ಪುನರ್ವಸತಿ ಯೋಜನೆಯಡಿ ಖಾಲಿ ಇರುವ ಯೋಜನಾ ಅನುಷ್ಠಾನಾಧಿಕಾರಿ, ಲೆಕ್ಕಿಗರು(ಗುಮಾಸ್ತ) ಹಾಗೂ ಕಚೇರಿ ಸಹಾಯಕರ ತಲಾ ಒಂದು ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಯೋಜನಾ ಅನುಷ್ಠಾನಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿಯಲ್ಲಿ ಬಿ.ಎಸ್.ಡಬ್ಲೂö್ಯ. ಅಥವಾ ಸಮಾಜಶಾಸ್ತçವನ್ನು ಅಭ್ಯಸಿಸಿರಬೇಕು. ಸ್ನಾತಕೋತ್ತರ ಪದವಿಯಲ್ಲಿ ಸಮಾಜಶಾಸ್ತç ಅಥವಾ ಮನೋವಿಜ್ಞಾನ ಅಭ್ಯಸಿಸಿರಬೇಕು. ಇದರೊಂದಿಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಮತ್ತು ಸರ್ಕಾರಿ ಅಧೀನ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವವಿರಬೇಕು. ಮೊಳಕಾಲ್ಮೂರು ತಾಲೂಕಿನ ನಿವಾಸಿಯಾಗಿರಬೇಕು. ಈ ಹುದ್ದೆಗೆ ಮಾಸಿಕ 9,000 ರೂ. ಗೌರವಧನ ನೀಡಲಾಗುವುದು.

 

ಲೆಕ್ಕಿಗರು(ಗುಮಾಸ್ತ) ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೂ ಸಹ ಕಂಪ್ಯೂಟರ್ ಜ್ಞಾನ ಇರುವುದು ಅತ್ಯಗತ್ಯವಾಗಿದ್ದು, ಮಾಸಿಕ 8,000 ರೂ. ಗೌರವಧನ ನೀಡಲಾಗುತ್ತದೆ. ಕಚೇರಿ ಸಹಾಯಕ ಹುದ್ದೆಗೆ ಕನಿಷ್ಠ 7ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು, ಇವರಿಗೆ ಮಾಸಿಕ 7,000 ರೂ. ಗೌರವಧನ ಸಿಗಲಿದೆ. ಲೆಕ್ಕಿಗ ಹಾಗೂ ಕಚೇರಿ ಸಹಾಯಕರು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕಿರುತ್ತದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳರುವ ಹಾಗೂ ಜಿಲ್ಲಾ ನಿವಾಸಿಗಳಿಗೆ ಮಾತ್ರ ಅರ್ಜಿಸಲ್ಲಿಸಬೇಕು. ಸ್ಥಳೀಯ ಭಾಷೆ ಹಾಗೂ ಇಂಗ್ಲಿಷ್ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೆರಿಟ್ ಹಾಗೂ ಕನಿಷ್ಠ 2 ವರ್ಷಗಳ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

ನಗರದ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಫೆ.20ರ ಸಂಜೆ 5 ಗಂಟೆಯ ಒಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 6360991070 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...