ಉದ್ಯೋಗ ವಾರ್ತೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

1 Min Read

ಚಿತ್ರದುರ್ಗ. ಜೂ.18: ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎಲ್.ಎ.ಡಿ.ಸಿ.ಎಸ್ ಕಚೇರಿಯಲ್ಲಿ ಪೂರ್ಣಾವಧಿ ಲೀಗಲ್‍ಯೇಡ್ ಕೌನ್ಸಿಲ್ ಎಂಗೇಜ್‍ಮೆಂಟ್ ಸಿಸ್ಟಮ್‍ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ, ಡೆಪ್ಯುಟಿ ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ ಹಾಗೂ ಅಸಿಸ್ಟೆಂಟ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಅವರಿಗೆ ಇದೇ  ಜೂನ್ 27ರಂದು ಸಂಜೆ ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *