ಚಿತ್ರದುರ್ಗ . ಫೆ.06: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ತುಂಬಿದ 45 ವರ್ಷ ಒಳಗಿನ ಅಭ್ಯರ್ಥಿಗಳು ದಿನಾಂಕ 20-02-2024ರ ಒಳಗಾಗಿ ಅರ್ಜಿಸಲ್ಲಿಸಬಹುದು.
ಜಿಲ್ಲಾ ಯೋಜನಾ ಸಂಯೋಜಕ (ಡಿಸ್ಟಿಕ್ಟ್ ಮಿಷನ್ ಕೋಆಡಿನೇಟರ್) ಒಂದು ಹುದ್ದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನ ಅಥವಾ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಪಡೆದಿರಬೇಕು.
ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ 3 ವರ್ಷದ ಯೋಜನೆ ನಿರ್ವಹಣೆ ಬಗ್ಗೆ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.50000/- ಗೌರವ ಧನ ನೀಡಲಾಗುವುದು.
ಲಿಂಗ ತಜ್ಞ (ಜೆಂಡರ್ ಸ್ಪೆಷಲಿಷ್ಟ್) ಒಂದು ಹುದ್ದೆ.
ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ಕಾರ್ಯ ಅಥವಾ ಇತರೆ ಸಾಮಾಜಿಕ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಲಿಂಗತ್ವ ಆಧಾರಿತ ವಿಷಯದ ಮೇಲೆ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.35,000/- ಗೌರವ ಧನ ನೀಡಲಾಗುವುದು.
ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (ಸ್ಪೆಷಲಿಷ್ಟ್ ಇನ್ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್) ಒಂದು ಹುದ್ದೆ. ಅಂಗೀಗೃತ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಬ್ಯಾಂಕಿಂಗ್, ಇತರೆ ಸಂಖ್ಯಾ ಶಾಸ್ತç ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್ ವಿಭಾಗದಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.28000/- ಗೌರವ ಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-235259 ಹಾಗೂ ಇ-ಮೇಲ್ [email protected] ಸಂಪರ್ಕಿಸಬಹುದು.