Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಮಿಷನ್ ಶಕ್ತಿ ಯೊಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

---Advertisement---

 

ಚಿತ್ರದುರ್ಗ . ಫೆ.06: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

18 ವರ್ಷ ತುಂಬಿದ 45 ವರ್ಷ ಒಳಗಿನ ಅಭ್ಯರ್ಥಿಗಳು ದಿನಾಂಕ 20-02-2024ರ ಒಳಗಾಗಿ ಅರ್ಜಿಸಲ್ಲಿಸಬಹುದು.

ಜಿಲ್ಲಾ ಯೋಜನಾ ಸಂಯೋಜಕ (ಡಿಸ್ಟಿಕ್ಟ್ ಮಿಷನ್ ಕೋಆಡಿನೇಟರ್) ಒಂದು ಹುದ್ದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನ ಅಥವಾ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಪಡೆದಿರಬೇಕು.

ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ 3 ವರ್ಷದ ಯೋಜನೆ ನಿರ್ವಹಣೆ ಬಗ್ಗೆ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.50000/- ಗೌರವ ಧನ ನೀಡಲಾಗುವುದು.

ಲಿಂಗ ತಜ್ಞ (ಜೆಂಡರ್ ಸ್ಪೆಷಲಿಷ್ಟ್) ಒಂದು ಹುದ್ದೆ.
ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ಕಾರ್ಯ ಅಥವಾ ಇತರೆ ಸಾಮಾಜಿಕ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಲಿಂಗತ್ವ ಆಧಾರಿತ ವಿಷಯದ ಮೇಲೆ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.35,000/- ಗೌರವ ಧನ ನೀಡಲಾಗುವುದು.

ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (ಸ್ಪೆಷಲಿಷ್ಟ್ ಇನ್ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್) ಒಂದು ಹುದ್ದೆ. ಅಂಗೀಗೃತ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಬ್ಯಾಂಕಿಂಗ್, ಇತರೆ ಸಂಖ್ಯಾ ಶಾಸ್ತç ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್ ವಿಭಾಗದಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.28000/- ಗೌರವ ಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-235259 ಹಾಗೂ ಇ-ಮೇಲ್  ddwcdcta@gmail.com  ಸಂಪರ್ಕಿಸಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment