Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

---Advertisement---

ಚಿತ್ರದುರ್ಗ.ಜುಲೈ.07: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.

ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.

ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊAದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment