ಚಿತ್ರದುರ್ಗ. ನ.26: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.30ರಂದು ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















