ಚಿತ್ರದುರ್ಗ. ಜೂನ್. 16: ನಗರದ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ ಜೂನ್ 19 ಗುರುವಾರದಂದು ಬೆಳಿಗ್ಗೆ 10 ರಿಂದ 2 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಹಾಗೂ ಮಹಿಳೆ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳುತ್ತಾರೆ.
ಆಸಕ್ತ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಯಾವುದೇ ಪದವಿ ಗಳಿಸಿರುವ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, 5 ಬಯೋಡೆಟಾ ಪ್ರತಿ ಹಾಗೂ ಪಾಸ್ ಪೋಟ್ ಸೈಜ್ ಫೋಟೋ ತರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 8105619020, ಅಥವಾ 9945587060 ಗೆ ಕರೆ ಮಾಡಬಹುದು. ಖುದ್ದಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಕಚೇರಿ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















