ಚಿತ್ರದುರ್ಗ. ಡಿ.16: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್)ನಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈರ್‍ಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುಕೊಳ್ಳುತ್ತಿದ್ದು, ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.26 ಅರ್ಜಿ ಸಲ್ಲಿಸಲು ಕೊನೆಯ ದಿನ.
ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ ರೂ.21000/-ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.
ಮಾಜಿ ಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಇದೇ ಡಿಸೆಂಬರ್ 26ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220982 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

