Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಚಿತ್ರದುರ್ಗದಲ್ಲಿ ಫೆಬ್ರವರಿ 05 ರಂದು ನೇರ ನೇಮಕಾತಿ ಸಂದರ್ಶನ

---Advertisement---

 

ಚಿತ್ರದುರ್ಗ. ಫೆ.01: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಫೆ.5ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಐಸಿಐಸಿಐ ಬ್ಯಾಂಕ್ (ಟಿವಿಎಸ್ ಟ್ರೈನಿಂಗ್ ಸರ್ವೀಸಸ್) ಮತ್ತು ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ನಲ್ಲಿ ಖಾಲಿ ಇರುವ ರಿಲೇಶಿಯನ್‍ಶಿಪ್ ಮ್ಯಾನೇಜರ್ ಮತ್ತು ಟ್ರೈನೀ ಕೇಂದ್ರ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಈ ಕಂಪನಿಗಳಿಗೆ ಕಾರ್ಯನಿರ್ವಹಿಸಲು 18 ರಿಂದ 28 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿದೆ.

ಐಸಿಐಸಿಐ ಬ್ಯಾಂಕ್ (ಟಿವಿಎಸ್ ಟ್ರೈನಿಂಗ್ ಸರ್ವೀಸಸ್)ನಲ್ಲಿ ರಿಲೇಶಿಯನ್‍ಶಿಪ್ ಮ್ಯಾನೇಜರ್‍ನ 80 ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ (ಬಿ.ಇ, ಬಿ.ಟೆಕ್ ಮತ್ತು ಎಂಬಿಎ ಅನ್ವಯಿಸುವುದಿಲ್ಲ) ಹೊಂದಿರಬೇಕು. ಪ್ರತಿ ಮಾಹೆ 21 ಸಾವಿರ ವೇತನ ನೀಡಲಾಗುವುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಿದೆ. ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ನಲ್ಲಿ ಟ್ರೈನೀ ಕೇಂದ್ರ ಮ್ಯಾನೇಜರ್‍ನ 40 ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಐಟಿಐ, ಯಾವುದೇ ಪದವಿ ಹೊಂದಿರಬೇಕು. ಮಾಸಿಕ ವೇತನ 13 ಸಾವಿರ ನೀಡಲಾಗುವುದು. ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಾತ್ರ ಕೆಲಸ ನಿರ್ವಹಿಸಬೇಕಿದೆ.

ಆಸಕ್ತರು ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಪೋಟೋ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...