Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆಗಳ ನೇಮಕ

---Advertisement---

ಸುದ್ದಿಒನ್, ಬೆಂಗಳೂರು, ಮೇ. 24 :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಒಟ್ಟು 902 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.

ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು.

ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment