Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವ್ಯವಸ್ಥಾಪಕರು, FDA, SDA ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಚಿತ್ರದುರ್ಗ :  ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ವಿವಿಧ ವೃಂದಗಳಲ್ಲಿ ಖಾಲಿ ಇರುವ ಈ ಕೆಳಕಂಡ 68 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್  ಮುಖಾಂತರ ((Online)) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಕೋರಿಯರ್/ಖುದ್ದಾಗಿ/ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ ಎಂದು ಈ ಮೂಲಕ ಸ್ಟಷ್ಟಪಡಿಸಿದೆ. ನೇರ ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಳಾದ ಅರ್ಜಿ ನಮೂನೆ, ಅರ್ಜಿ ಸಲ್ಲಿಸುವ ವಿಧಾನ, ಮೀಸಲಾತಿ ವರ್ಗೀಕರಣ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಹಾಗೂ ಅರ್ಜಿ ಶುಲ್ಕ, ಸಲ್ಲಿಸಬೇಕಾದ ದಾಖಲೆಗಳು, ಆಯ್ಕೆ ವಿಧಾನ, ಸೂಚನೆಗಳು ಇತ್ಯಾದಿ ಎಲ್ಲಾ ಹೆಚ್ಚಿನ ವಿವರಗಳನ್ನು ಬ್ಯಾಂಕ್ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ನೀಡಲಾಗಿದೆ. ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಕ್ರ. ಸಂ.ಹುದ್ದೆಗಳ ಹೆಸರು ಮತ್ತು ಖಾಲಿ ಇರುವ ಹುದ್ದೆಗಳ ಸಂಖ್ಯೆ

1.  ಸಹಾಯಕ ಪ್ರಧಾನ ವ್ಯವಸ್ಥಾಪಕರು- 06
2.  ಪ್ರಥಮ ದರ್ಜೆ ಗುಮಾಸ್ತರು – 09
3.   ದ್ವಿತೀಯ ದರ್ಜೆ ಗುಮಾಸ್ತರು – 35
4.   ಕಂಪ್ಯೂಟರ್ ಇಂಜೀನಿಯರ್ – 02
5.   ವಾಹನ ಚಾಲಕರು – 02
6.   ಅಟೆಂಡರ್/ಸಹಾಯಕರು -14

ಒಟ್ಟು 68 ಹುದ್ದೆಗಳು ಖಾಲಿ ಇದ್ದು ಅನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ:15.09.2023 ರಿಂದ ದಿನಾಂಕ:16.10.2023 ರವರೆಗೆ ಸಲ್ಲಿಸಬಹುದಾಗಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ಲಭ್ಯವಿದ್ದು, ಆಸಕ್ತಿವುಳ್ಳ ಅಭ್ಯರ್ಥಿಗಳು ಬ್ಯಾಂಕ್ ವೆಬ್‍ಸೈಟ್‍ಗೆ ಭೇಟಿ ನೀಡಿ ಅನ್‍ಲೈನ್ ಮೂಲಕ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಚಿತ್ರದುರ್ಗ, ಇದರ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ
ಪ್ರಧಾನ ಕಛೇರಿ, ಜಿಲ್ಲಾಧಿಕಾರಿಗಳ ರಸ್ತೆ ,                  ಚಿತ್ರದುರ್ಗ -577501.
Email. ID : md_cdccb@yahoo.co.in
ದೂರವಾಣಿ ಸಂಖ್ಯೆ :08194 – 222546.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment