Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗದ ಆಮಿಷ ; ವಂಚಕರಿಂದ ಎಚ್ಚರವಹಿಸಿ : ಡಾ.ಯುವರಾಜ್

---Advertisement---

ಚಿತ್ರದುರ್ಗ. ಮೇ.26: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗದ ಆಮಿಷವೊಡ್ಡಿ ಕೆಲಸ ಕೊಡಿಸುವುದಾಗಿ ಜಾಲ ಬೀಸಿರುವ ವಂಚಕರು ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡುತ್ತಿರುವ ಮಾಹಿತಿ ನಿರ್ದೇಶಕರ ಗಮನಕ್ಕೆ ಬಂದಿರುತ್ತದೆ. ವಂಚಕರಿಗೆ ಹಣಕೊಟ್ಟು ಮೋಸಹೋದರೆ ಸಿ.ಎಂ.ಸಿ.ಆರ್.ಐ. ಸಂಸ್ಥೆ ಹೊಣೆಯಾಗಿರುವುದಿಲ್ಲ ನಿರ್ದೇಶಕ ಡಾ.ಯುವರಾಜ್ ಎಚ್ಚರಿಸಿದ್ದಾರೆ.

 

ಸಾಕಷ್ಟು ನಿರುದ್ಯೋಗಿ ಆಕ್ಷಾಂಕ್ಷಿಗಳು ಪ್ರತಿದಿನ ಸಂಸ್ಥೆಗೆ ಜನಪ್ರತಿನಿಧಿಗಳ ಶಿಫಾರಸ್ಸು ತಂದು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಜೊತೆಯಲ್ಲಿ ಮಧ್ಯವರ್ತಿಗಳನ್ನು ಸಹ ಕರೆದುಕೊಂಡು ಬರುತ್ತಿದ್ದಾರೆ. ಆದರೆ ಸಂಸ್ಥೆಯಲ್ಲಿ ಯಾವುದೆ ನೇಮಕಾತಿ ಮಾಡುವುದಿದ್ದಲ್ಲಿ ಪತ್ರಿಕೆ ಪ್ರಕಟಣೆ ನೀಡಿ ಸರ್ಕಾರದ ನಿಯಮಾನುಸಾರ ಮೀಸಲಾತಿ ಹಾಗೂ ಪಡೆದ ಅಂಕಗಳ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುವುದು. ಯಾವುದೇ ಶಿಫಾರಸ್ಸು ಆಮಿಷಗಳಿಗೆ ಬಲಿಯಾಗಬಾರದೆಂದು ಡಾ.ಯುವರಾಜ್ ತಿಳಿಸಿರುತ್ತಾರೆ.

 

ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿಗಳನ್ನು ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ದಿನಾಂಕ:18-12-2025 ರಂದು ಹೊರಡಿಸಲಾಗಿರುತ್ತದೆ. ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿರುತ್ತದೆ. ಸಂಸ್ಥೆಯ ಹೆಸರಿನಲ್ಲಿ ಗ್ರೂಪ್ ಡಿ, ಲ್ಯಾಬ್ ಟೆಕ್ನೀಷಿಯನ್, ಶುಶ್ರೂಷಾ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಬೋಧಕರು ಇತರೆ ತಂತ್ರಜ್ಞರುಗಳ ಹುದ್ದೆಗಳ ಕೆಲಸಕೊಡಿಸುವುದಾಗಿ ಯಾರಾದರೂ ಆಮಿಷವೊಡ್ಡಿದ್ದಲ್ಲಿ ಮೋಸ ಹೋಗಬಾರದೆಂದು ಮತ್ತು ಮಧ್ಯವರ್ತಿಗಳಿಗೆ ಹಣ ನೀಡದೇ ಜಾಗರೂಕರಾಗಿರಬೇಕು. ಒಂದು ವೇಳೆ ಯಾರಾದರೂ ಮಧ್ಯವರ್ತಿಗಳು ಕೆಲಸಕೊಡಿಸುವುದಾಗಿ ಆಮಿಷವೊಡ್ಡಿದ್ದದಲ್ಲಿ ಗಮನಕ್ಕೆ ತರುವಂತೆ ಎಂದು ನಿರ್ದೇಶಕ ಡಾ. ಬಿ.ವೈ.ಯುವರಾಜ್ ಕೋರಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಈಗ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಹಸ್ತಾಂತರವಾಗಿದ್ದು, ಬೋಧನಾ ಚಟುವಟಿಕೆಗಳು ಆರಂಭಿಸಲಾಗಿದೆ. ಆದರೆ ಇತರೆ ಮೂಲಭೂತ ಸೌಕರ್ಯಗಳನ್ನು ಅನುದಾನ ಲಭ್ಯತೆ ಆಧಾರದಲ್ಲಿ ನೀಡುವುದಾಗಿ ಇದೆ ವೇಳೆ ನಿರ್ದೇಶಕ ಡಾ. ಬಿ.ವೈ.ಯುವರಾಜ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now