Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಶಿವಮೊಗ್ಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ

---Advertisement---

 

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 4 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ 1 ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂಬಿಬಿಎಸ್ ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಕ್ಟೋಬರ್ 17ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ತ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ, ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-222382ಕ್ಕೆ ಕರೆ ಮಾಡಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...