Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೈನಿಕ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

Facebook
Twitter
Telegram
WhatsApp

ಚಿತ್ರದುರ್ಗ,(ಅಕ್ಟೋಬರ್.20) :ಕರ್ನಾಟಕದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 13 ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ 19 ಅಕ್ಟೋಬರ್ 2022 ರಿಂದ 07 ನವೆಂಬರ್ 2022 ರೊಳಗಾಗಿ 50 ವರ್ಷ ವಯೋಮಿತಿಯನ್ನು ಮೀರದವರು ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ 58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ,  ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಈ ವಿಳಾಸಕ್ಕೆ ಸಲ್ಲಿಸಬೇಕು.

ವಿದ್ಯಾರ್ಹತೆ ಪಿ.ಯು.ಸಿ ಅಥವಾ ಅದರ ತತ್ಸಮಾನ ಮಾನ್ಯತೆ ಪಡೆದ ಪದವಿ ಪೂರ್ವ ಕಾಲೇಜುಗಳಿಂದ ಪಡೆದಿರಬೇಕು ಅಥವಾ 10 ನೇ ತರಗತಿ ಉತ್ತೀರ್ಣಗೊಂಡು ಸೇನೆಯಲ್ಲಿ 15 ವರ್ಷಗಳಿಗೆ ಕಡಿಮೆಯಿಲ್ಲದೇ ಸೇವೆ ಸಲ್ಲಿಸಿ ಪಡೆದ ಪದವಿ ಪ್ರಮಾಣ ಪತ್ರ ಹೊಂದಿರಬೇಕು. ಈ ಹುದ್ದೆಯು ಕೇವಲ ಮಾಜಿ ಸೈನಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಅರ್ಜಿಯೊಂದಿಗೆ ಸೇವಾ ಪುಸ್ತಕ, ಗುರುತಿನ ಚೀಟಿ, ವಿದ್ಯಾರ್ಹತೆಯ ದಾಖಲೆಗಳು ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳ ಪ್ರತಿಯನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದ ದಿನಾಂಕ 18 ಅಕ್ಟೋಬರ್ 2022 ಸಂಪುಟ 157 ಸಂಚಿಕೆ 210 ನ್ನು ಅನುಸರಿಸುವುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!