ಚಿತ್ರದುರ್ಗ,(ಅಕ್ಟೋಬರ್.20) :ಕರ್ನಾಟಕದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 13 ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ದಿನಾಂಕ 19 ಅಕ್ಟೋಬರ್ 2022 ರಿಂದ 07 ನವೆಂಬರ್ 2022 ರೊಳಗಾಗಿ 50 ವರ್ಷ ವಯೋಮಿತಿಯನ್ನು ಮೀರದವರು ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ 58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಈ ವಿಳಾಸಕ್ಕೆ ಸಲ್ಲಿಸಬೇಕು.
ವಿದ್ಯಾರ್ಹತೆ ಪಿ.ಯು.ಸಿ ಅಥವಾ ಅದರ ತತ್ಸಮಾನ ಮಾನ್ಯತೆ ಪಡೆದ ಪದವಿ ಪೂರ್ವ ಕಾಲೇಜುಗಳಿಂದ ಪಡೆದಿರಬೇಕು ಅಥವಾ 10 ನೇ ತರಗತಿ ಉತ್ತೀರ್ಣಗೊಂಡು ಸೇನೆಯಲ್ಲಿ 15 ವರ್ಷಗಳಿಗೆ ಕಡಿಮೆಯಿಲ್ಲದೇ ಸೇವೆ ಸಲ್ಲಿಸಿ ಪಡೆದ ಪದವಿ ಪ್ರಮಾಣ ಪತ್ರ ಹೊಂದಿರಬೇಕು. ಈ ಹುದ್ದೆಯು ಕೇವಲ ಮಾಜಿ ಸೈನಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಅರ್ಜಿಯೊಂದಿಗೆ ಸೇವಾ ಪುಸ್ತಕ, ಗುರುತಿನ ಚೀಟಿ, ವಿದ್ಯಾರ್ಹತೆಯ ದಾಖಲೆಗಳು ಹಾಗೂ ಮೀಸಲಾತಿ ಸಂಬಂಧಿತ ದಾಖಲೆಗಳ ಪ್ರತಿಯನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದ ದಿನಾಂಕ 18 ಅಕ್ಟೋಬರ್ 2022 ಸಂಪುಟ 157 ಸಂಚಿಕೆ 210 ನ್ನು ಅನುಸರಿಸುವುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…