ಬಾಲ್ಯವಿವಾಹ ಮುಕ್ತ ಚಿತ್ರದುರ್ಗ ಜಿಲ್ಲೆಯನ್ನಾಗಿಸಲು ಕೈ ಜೋಡಿಸಿ : ಡಾ. ಆಕಾಶ್

2 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 25 : ಬಾಲ್ಯವಿವಾಹ ಮುಕ್ತ ಚಿತ್ರದುರ್ಗ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಕೈ ಜೋಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆಕಾಶ್ ಎಸ್. ತಿಳಿಸಿದರು.

ನಗರದ ಕ್ರೀಡಾ ಭವನದಲ್ಲಿ ಆಶ್ರಿತ ಸಂಸ್ಥೆ ಚಿತ್ರದುರ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೋಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಷೇಧ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಬಾಲ್ಯವಿವಾಹ ಪದ್ಧತಿ ಕೊನೆಗಾಣಿಸಲು ಸಾಕಷ್ಟು ಕೆಲಸ ಮಾಡುತ್ತಿದ್ದರು ಇನ್ನೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಬೇಸರ ತರಿಸುತ್ತಿದೆ ಕೆಲ ಶಿಕ್ಷಿತರು ತಮ್ಮ ಕಣ್ಣೆದುರಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರು ಅದನ್ನು ತಡೆಯುವ ಕಾರ್ಯ ಮಾಡದೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜವಾಬ್ದಾರಿ ಎಂಬ ಮನಸ್ಥಿತಿಯಿಂದ ಹೊರಬರಬೇಕೆಂದು ಕರೆ ನೀಡಿದ ಅವರು  ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ ಬಾಲಗರ್ಭಿಣಿಯರ ಸಂಖ್ಯೆಗೆ ಕಡಿವಾಣ ಹಾಕಲು ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಯುವ ಸಂಬಂಧ ಜಿಲ್ಲಾಡಳಿತ ವ್ಯಾಪಕವಾಗಿ ಜಾಗೃತಿ ಕಾರ್ಯಗಳು ನಡೆಯಬೇಕಿದೆ ಪ್ರೌಢಶಾಲಾ ಮತ್ತು ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಬೇಕು ಹಾಗೇಯೇ ಇಲಾಖೆಗಳ ಅಧಿಕಾರಿಗಳು ಪ್ರತಿಯೊಬ್ಬರು ಭಾಗಿಯಾಗಿ ಕಾನೂನಿನ ತಿಳುವಳಿಕೆ ಪಡೆದುಕೊಂಡು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ಮಾಡಬೇಕೆಂದು ತಿಳಿಸಿದರು.

ಆಶ್ರಿತ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಎಸ್. ನಾಗರಾಜ್ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ಆಶ್ರಿತ ಸಂಸ್ಥೆ ಕಳೆದ ಇಪ್ಪತ್ತು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ ಪ್ರಸಕ್ತ ನಾಲ್ಕು ತಿಂಗಳಿನಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಡಿ.ವೈ.ಎಸ್. ಪಿ ದಿನಕರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶೀಲಾ ಪಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಆರ್. ಸಿ.ಹೆಚ್. ಅಧಿಕಾರಿ ಡಾ.ಅಭಿನವ್, ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಬಿನು ವರ್ಗೀಸ್ ತರಬೇತಿ ನೀಡಿದರು. ಧನಂಜಯ ಪ್ರಾರ್ಥಿಸಿ, ಜಿಲ್ಲಾ ಸಂಯೋಜಕ ಡಿ.ಒ. ಮುರಾರ್ಜಿ, ಸ್ವಾಗತಿಸಿ, ಹರ್ಷವರ್ಧನ ನಿರೂಪಿಸಿ, ದೇವಿರಮ್ಮ ವಂದಿಸಿದರು.

ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Share This Article
Enable Notifications OK No thanks