Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಹಕಾರಿ ಸಂಘಗಳ ಜೊತೆ ಕೈಜೋಡಿಸಿ : ವಿದ್ಯಾಧರ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ಹಾಲು ಗುಣಮಟ್ಟವಾಗಿದ್ದರೆ ಒಳ್ಳೆಯ ದರ ಕೊಡಬಹುದೆಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಕಕ್ಷ ವಿದ್ಯಾಧರ ಹೇಳಿದರು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ತಿರುಮಲ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಚಿತ್ರದುರ್ಗ ವಿಭಾಗದ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಪ್ರಾದೇಶಿಕ ಸಭೆ ಉದ್ಗಾಟಿಸಿ ಮಾತನಾಡಿದರು.

ಶಿವಮೊಗ್ಗ ಹಾಲು ಒಕ್ಕೂಟ ಗುಣಮಟ್ಟದಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಎರಡನೆ ಸ್ಥಾನದಲ್ಲಿದೆ. ಹಾಲಿನ ಗುಣಮಟ್ಟ ಕಾಪಾಡಿದಾಗ ಬೇಡಿಕೆ ಹೆಚ್ಚುತ್ತದೆ. ಇಲ್ಲದಿದ್ದರೆ ಪ್ರೋತ್ಸಾಹ ಧನ ಬರಲ್ಲ. ರೈತರಿಗೆ 35 ಕೋಟಿ ರೂ.ಗಳ ಸಬ್ಸಿಡಿ ಕೊಡುತ್ತಿದ್ದೇವೆ. ಹಸುಗಳಿಗೆ ಇನ್ಸುರೆನ್ಸ್, ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ ಪೂರೈಸುತ್ತಿದ್ದೇವೆ. ಸಹಕಾರಿ ಸಂಘಗಳ ಜೊತೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಸಂಘಗಳ ನಿರ್ವಹಣೆ, ಏನಾದರೂ ಕುಂದುಕೊರತೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಬೈಲಾ ಪ್ರಕಾರ ಹಾಲು ಒಕ್ಕೂಟದಲ್ಲಿ ಹಣಕಾಸು ವ್ಯವಹಾರ ನಡೆಸುವಂತಿಲ್ಲ. ಹಾಗಾಗಿ ಹಸುಗಳ ಸಾಕಾಣಿಕೆಗೆ ಸಾಲ ಪಡೆಯಲು ಡಿ.ಸಿ.ಸಿ.ಬ್ಯಾಂಕನ್ನು ಸಂಪರ್ಕಿಸಿ. ನಾನು ಕೂಡ ಬೋರ್ಡ್‍ನಲ್ಲಿ ಈ ವಿಚಾರವನ್ನು ಚರ್ಚಿಸುತ್ತೇನೆ. ಶಿವಮೊಗ್ಗದಲ್ಲಿ ಡಿ.ಸಿ.ಸಿ. ಬ್ಯಾಂಕ್‍ನಿಂದ ಸಾಲ ಕೊಡುವ ವ್ಯವಸ್ಥೆಯಿದೆ ಎಂದು ತಿಳಿಸಿದರು.

ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಜಿ.ಪಿ.ರೇವಣಸಿದ್ದಪ್ಪ, ಬಿ.ಆರ್.ರವಿಕುಮಾರ್, ಜಿ.ಬಿ.ಶೇಖರ್, ಬಿ.ಸಿ.ಸಂಜೀವಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಶೇಖರ್, ವ್ಯವಸ್ಥಾಪಕ ನವೀನ್‍ಕುಮಾರ್, ಕುಮಾರಸ್ವಾಮಿ ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment