Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಭೂಸ್ವಾಧೀನ ಪ್ರಕ್ರಿಯೆ ಜಂಟಿ ಸರ್ವೇ ಕಾರ್ಯಕ್ಕೆ ಸೂಚನೆ : ಅನಿಲ್‌ಕುಮಾರ್

Facebook
Twitter
Telegram
WhatsApp

 

ಚಿತ್ರದುರ್ಗ,(ಏ.16) : ಕಂದಾಯ, ಭೂಮಾಪನ, ರೈಲ್ವೆ, ಲೋಕೋಪಯೋಗಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ, ನೂತನ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಜಂಟಿ ಸರ್ವೇ ಕಾರ್ಯಕೈಗೊಳ್ಳಬೇಕು. ಮೇ ತಿಂಗಳ ಮಧ್ಯದ ವೇಳೆಗೆ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಬೇಕು ಎಂದು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅನಿಲ್‌ಕುಮಾರ್ ಸೂಚನೆ ನೀಡಿದರು.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ(ಏ.16), ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಭೂಸ್ವಾಧೀನ ಸ್ಥಿತಿಗತಿ ಕುರಿತು ಸಭೆ ಜರುಗಿಸಿ ಮಾತನಾಡಿದರು.

ಮೇ ಅಂತ್ಯದ ವೇಳೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ತ್ವರಿತವಾಗಿ ಭೂ ಸ್ವಾಧೀನ ಪ್ರಕ್ರಿಯೆ ಜರುಗಬೇಕು. ಅಧಿಸೂಚನೆ ಹೊರಡಿಸಿದ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡು ಸಂತ್ರಸ್ಥರಿಗೆ ಪರಿಹಾರ ಧನ ವಿತರಿಸಬೇಕು. ಭೂಸ್ವಾಧೀನಕ್ಕೆ ಅಗತ್ಯ ಇರುವ 200 ಕೋಟಿ ರೂಪಾಯಿಗಳ ಪರಿಹಾರ ಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜೂನ್ ಅಂತ್ಯಕ್ಕೆ 2 ಹಂತದ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ

ಹಿರಿಯೂರು ತಾಲೂಕಿನಲ್ಲಿ 461.6 ಎಕರೆ ಜಮೀನಿನ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವಾರದಲ್ಲಿ ಭೂಮಿ ವಶಕ್ಕೆ ಪಡೆದು ಪರಭಾರೆ ಮಾಡಲಾಗುವುದು. ಚಿತ್ರದುರ್ಗ ತಾಲೂಕಿನಲ್ಲಿ 243.29 ಎಕರೆ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಹೆಚ್ಚುವರಿ ಭೂಮಿಯನ್ನು ಕೇಳಿದ್ದರಿಂದ, ಎರೆಡನೇ ಹಂತದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ ಅಂತ್ಯಕ್ಕೆ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಹಿರಿಯೂರು ತಾಲೂಕಿಗೆ 77 ಕೋಟಿ ರೂಪಾಯಿ ಪರಿಹಾರ‌ ಧನ ಬಿಡುಗಡೆಯಾಗಿದ್ದು, ಸುಮಾರು 49 ಕೋಟಿ ಪರಿಹಾರ ಧನ ವಿತರಿಸಲಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ 183 ಎಕರೆ ಭೂಮಿ ಸ್ವಾಧೀನಕ್ಕೆ ಪರಿಹಾರಧನ ನಿಗದಿಪಡಿಸಲಾಗಿದೆ ಎಂಬ ಮಾಹಿತಿಯನ್ನು ಉಪವಿಭಾಗಧಿಕಾರಿ ಆರ್.ಚಂದ್ರಯ್ಯ ಸಭೆಯಲ್ಲಿ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಶ್ರೀಧರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎನ್.ಸತೀಶ್ ಬಾಬು, ಭೂದಾಖಲೆ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!