Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ವಿದ್ಯಾ ವಿಕಾಸ ಅಕಾಡೆಮಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ನಗರದ ವಿದ್ಯಾ ವಿಕಾಸ ಅಕಾಡೆಮಿ ವತಿಯಿಂದ ಇಂದು ಸಂಸ್ಥೆಯ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.

​ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಮತ್ತು ಸೃಜನಶೀಲತೆಗೆ ವೇದಿಕೆ ಕಲ್ಪಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲರಾದ ಶ್ರೀ ಪದೀಶ್ ಕುಮಾರ್ ಅವರು ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು.

​ಈ ಸಂದರ್ಭದಲ್ಲಿ ಶ್ರೀಮತಿ ಮಾನಸ, ಶ್ರೀಮತಿ ಸಾಕ್ಷಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಅಶೋಕ್, ಶ್ರೀಮತಿ ಹರೀಬಾ ಸೇರಿದಂತೆ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now