Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ: ಅಂಗಾಂಗ ದಾನ ಜಾಗೃತಿಯ ಸ್ತಬ್ಧಚಿತ್ರಕ್ಕೆ ಜಿಲ್ಲಾಮಟ್ಟದ ಪ್ರಥಮ ಬಹುಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 :  71ನೇ ಕನ್ನಡ ರಾಜ್ಯೋತ್ಸವವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆ ಚಿತ್ರದುರ್ಗ ಇಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ರಾಜರಾಜೇಶ್ವರಿ ಭಾವಚಿತ್ರಕ್ಕೆ ಪುಷ್ಟಾರ್ಚನೆ ಅರ್ಪಿಸುವುದರ ಮೂಲಕ ಡೀನ್ ಹಾಗೂ ನಿರ್ದೇಶಕರಾದ ಡಾ. ಬಿ.ವೈ. ಯುವರಾಜ್‍ರವರು ಕನ್ನಡ ನಾಡು ನುಡಿಯ ಕುರಿತು ಸಿಬ್ಬಂದಿಗಳಿಗೆ ಕನ್ನಡ ಭಾಷೆಯ ಅಭಿಮಾನದ ಮಾತುಗಳನ್ನು ಹೇಳಿದರು. ಹಾಗೂ ಪ್ರತಿ ಮೈದ್ಯಕೀಯ ಕಾರ್ಯಚಟುವಟಿಕೆಗಳಲ್ಲಿ ಕನ್ನಡ ಭಾಷೆಯನ್ನು ಸಮರ್ಥವಾಗಿ ಸಂವಹನ ಮಾಡಲು ಸಲಹೆ ನೀಡಿದರು.

ವೈದ್ಯಕೀಯ ಅಧೀಕ್ಷಕರಾದ ಡಾ. ಮೇಘ ಜಿ.ಹೆಚ್. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ, ನಿವಾಸಿ ವೈದ್ಯಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಇವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗದಲ್ಲಿ ಭಾವಹಿಸಿದ್ದರು.
ಹಾಗೂ ಜಿಲ್ಲಾ ಮರುಘರಾಜೇಂದ್ರ ಕ್ರಿಡಾಂಗಣದಲ್ಲಿ ಆಚರಿಸಲಾದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿ.ಎಂ.ಸಿ.ಆರ್.ಐ.ನ ನಿರ್ದೇಶಕರಾದ ಡಾ. ಬಿ.ವೈ. ಯುವರಾಜ್, ವೈದ್ಯಕೀಯ ಅಧೀಕ್ಷಕರಾದ ಡಾ. ಮೇಘಾ ಜಿ.ಹೆಚ್. ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ, ನಿವಾಸಿ ವೈದ್ಯಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಇವರು ಭಾಗವಹಿಸಿದ್ದರು.

ಚಿತ್ರದುರ್ಗದ ನೀಲಕಂಠೇಶ್ವ ದೇವಸ್ಥಾನದಿಂದ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಮರೆವಣಿಗೆಯಲ್ಲಿ ಭಾಗವಹಿಸಿದ್ದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆವತಿಯಿಂದ “ನಿಮ್ಮ ಅಂಗಾಂಗ ಧಾನ ಮಹಾಧಾನ, ಮೊತ್ತೊಬ್ಬರಿಗೆ ಜೀವಧಾನ” ಎಂಬ ಶೀರ್ಷಿಕೆಯಡಿಯಲ್ಲಿ ಸ್ಥಬ್ದ ಚಿತ್ರದ ಪ್ರದರ್ಶನವನ್ನು ಏರ್ಪಡಿಸಿದ್ದು ದಾರಿಯುದ್ದಕ್ಕೂ ಸಾರ್ವಜನಿಕರ ಹಾಗೂ ಎಲ್ಲಆ ಕನ್ನಡ ಅಭಿಮಾನಿಗಳ ಕಣ್ಮನ ಸೆಳೆಯಿತು. ಹಾಗು ಅಂಗಾಂಗ ಧಾನದ ಪ್ರಾಮುಖ್ಯತೆಯನ್ನು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಯಶಸ್ವಿಯಾಯಿತು.

ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಥಬ್ದ ಚಿತ್ರಗಳಲ್ಲಿ ಸಿ.ಎಂ.ಸಿ.ಆರ್.ಐ. “ನಿಮ್ಮ ಅಂಗಾಂಗ ಧಾನ ಮಹಾಧಾನ, ಮೊತ್ತೊಬ್ಬರಿಗೆ ಜೀವಧಾನ” ಎಂಬ ಶೀರ್ಷಿಕೆಯಡಿಯಲ್ಲಿ ಸ್ಥಬ್ದ ಚಿತ್ರವನ್ನು ಜಿಲ್ಲಾ ಮಟ್ಟದ ಅತ್ಯುತ್ತಮ ಸ್ಥಳ ಚಿತ್ರವೆಂದು ಮಾನ್ಯ ಜಿಲ್ಲಾಧಿಕಾರಿಗಳು ಗುರುತಿಸಿ ಪ್ರಥಮ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಹಾಗೂ ಈ ಗೌರವಕ್ಕೆ ಭಾಜನರಾಗಲು ಕಾರಣರಾದ ಸಿ.ಎಂ.ಸಿ.ಆರ್.ಐ.ನ ಬೋಧಕ ಸಿಬ್ಬಂದಿಯನ್ನು ಅಭಿನಂದಿಸಿದರು.

ಈ ಪ್ರಾತಃಸ್ಮರಣೀಯ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ: ವೇಣು, ನೋಡಲ್ ಅಧಿಕಾರಿಗಳು, ಡಾ. ಪರಮಾನಂದರೆಡ್ಡಿ, ಡಾ. ಗಣೇಶ್, ಡಾ: ಪ್ರಜ್ವಲ್, ಹಾಗೂ ಶುಶ್ರೂಷಾಧಿಕಾರಿಗಳಾದ ಶ್ರೀ ಆರ್.ತಿಪ್ಪೇಸ್ವಾಮಿ, ಪಿ.ಪಾಲಾಕ್ಷ, ಸುಷ್ಮಿತ ಸಿ.ಟಿ.. ಲಲಿತಾ ಎನ್. ಉಷಾ ಟಿ.ಪಿ. ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಶುಶ್ರೂಷಾ ವಿದ್ಯಾರ್ಥಿಗಳು ಒಳಗೊಂಡಂತೆ ಸಿಬ್ಬಂದಿಗಳು ಹೊರಸಂಪನ್ಮೂಲ ಸಿಬ್ಬಂದಿಗಳು ಭಾವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now