Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್ ಕುಲಕರ್ಣಿ ಪ್ರಕರಣ ತೀರ್ಪು ನೀಡಿದ ಜಡ್ಜ್ ಸಂತೋಷ್ ಭಟ್: ಹೈ ಪ್ರೊಫೈಲ್ ಕೇಸ್‌ಗಳ ಹಿಂದೆ ಇರುವ ಕಠಿಣ ನ್ಯಾಯಾಧೀಶ

---Advertisement---

 

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಕಠಿಣ ಹಾಗೂ ನಿಷ್ಪಕ್ಷಪಾತ ತೀರ್ಪುಗಳಿಗೆ ಹೆಸರಾದವರು. ಪ್ರಸ್ತುತ ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿರುವ ಅವರು, ಹಲವಾರು ಹೈ ಪ್ರೊಫೈಲ್ ಪ್ರಕರಣಗಳಲ್ಲಿ ತೀರ್ಪು ನೀಡಿ ಗಮನ ಸೆಳೆದಿದ್ದಾರೆ.

ಹಣಬಲ ಅಥವಾ ಅಧಿಕಾರದ ಒತ್ತಡಕ್ಕೆ ಮಣಿಯದ ನ್ಯಾಯಾಧೀಶರಾಗಿ ಖ್ಯಾತಿ ಪಡೆದಿರುವ ಸಂತೋಷ್ ಭಟ್, ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ತೀರ್ಪುಗಳನ್ನು ನೀಡಿದ್ದಾರೆ.ವಿನಯ್ ಕುಲಕರ್ಣಿ ಪ್ರಕರಣದ ಹೊರತಾಗಿಯೂ, ಇತರ ಕೆಲ ಪ್ರಮುಖ ಪ್ರಕರಣಗಳಲ್ಲಿಯೂ ಅವರ ತೀರ್ಪುಗಳು ಚರ್ಚೆಗೆ ಗ್ರಾಸವಾಗಿವೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ತೀರ್ಪು ಜನರಲ್ಲಿ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಬಲಪಡಿಸಿತು.
ಇದೇ ರೀತಿ, ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧವೂ ಅವರು ತೀರ್ಪು ನೀಡಿದ್ದರು. ನಂತರ ಹೈಕೋರ್ಟ್‌ನಿಂದ ಸತೀಶ್ ಸೈಲ್‌ಗೆ ಜಾಮೀನು ದೊರಕಿದ್ದರೂ, ಈ ಪ್ರಕರಣವು ಸಾಕಷ್ಟು ಚರ್ಚೆಗೆ ಕಾರಣವಾಯಿತು.ಇನ್ನೂ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ ತೀರ್ಪು ಕೂಡಾ ಗಮನಾರ್ಹವಾಗಿದೆ.

ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಎಂ ವಿರುದ್ಧ ತನಿಖೆ ಮುಂದುವರಿಸಲು ಅನುಮತಿ ನೀಡಿದ್ದರು.ಈ ಎಲ್ಲ ತೀರ್ಪುಗಳ ಮೂಲಕ ಸಂತೋಷ್ ಗಜಾನನ ಭಟ್ ಅವರು ನ್ಯಾಯಾಂಗದಲ್ಲಿ ಕಟ್ಟುನಿಟ್ಟಿನ ಹಾಗೂ ನಿರ್ಭೀತ ನ್ಯಾಯಾಧೀಶರಾಗಿ ಗುರುತಿಸಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now