Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ ರೈತರು ತಪ್ಪದೇ ಬೆಳೆವಿಮೆ ನೋಂದಾಯಿಸಿಕೊಳ್ಳಿ: ಟಿ.ರಘುಮೂರ್ತಿ

---Advertisement---

ಚಿತ್ರದುರ್ಗ. ಜುಲೈ 22:  2026-27ನೇ ಸಾಲಿನ ಮುಂಗಾರು ಹಂಗಾಮಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 31 ನೋಂದಣಿಗೆ ಕೊನೆಯ ದಿನವಾಗಿದೆ ಎಂದು ಚಿತ್ರದುರ್ಗ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ತಿಳಿಸಿದ್ದಾರೆ.
ಪ್ರಸಕ್ತ ಮುಂಗಾರು ಹಂಗಾಮು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಮನವಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯ 160 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ಬೆಳೆ ಸಾಲ ವಿತರಿಸಲಾಗಿದ್ದು, ಬೆಳೆ ವಿಮೆ ವ್ಯಾಪ್ತಿಗೆ ಬರುವ ಬೆಳೆಗಳಿಗೆ ಸಾಲ ಪಡೆದ ಎಲ್ಲಾ ರೈತರು ಜುಲೈ 31ರ ಒಳಗಾಗಿ ತಪ್ಪದೇ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಬೆಳೆ ವಿಮೆ ನೋಂದಾಯಿಸಲು ರೈತರು ತಾವು ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸಂಪರ್ಕಿಸಿ, ಜಿಲ್ಲೆಯ 22 ಡಿ.ಸಿ.ಸಿ ಬ್ಯಾಂಕ್ ಶಾಖೆಗಳಲ್ಲಿ ಬೆಳೆ ವಿಮೆ ಮೊತ್ತ ಪಾವತಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಹಾಗೂ ಮೇಲ್ವಿಚಾರಕರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ತಿಳಿಸಿದ್ದಾರೆ.
ಫೋಟೋ ವಿವರ: ಶಾಸಕ ಟಿ.ರಘುಮೂರ್ತಿ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now