Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸಂಪುಟ ಕಸರತ್ತಿಗೆ ಜೂನ್ 3ರ ಮುಹೂರ್ತ: ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದೇನು?

---Advertisement---

ಸುದ್ದಿಒನ್,ಕಲಬುರಗಿ,ಮೇ.31: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತು ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿಯ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಅಪ್‌ಡೇಟ್ ನೀಡಿದ್ದಾರೆ.ಪ್ರಸ್ತುತ ಹೈಕಮಾಂಡ್ ಅಂಗಳಕ್ಕೆ ಯಾವುದೇ ಅಧಿಕೃತ ಪ್ರಸ್ತಾಪ ಬಂದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಮುಂಬರುವ ಜೂನ್ 3ರಂದು ನಡೆಯಲಿರುವ ಹೈವೋಲ್ಟೇಜ್ ಸಭೆಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂಬ ಸುಳಿವು ನೀಡಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸಚಿವ ಸಂಪುಟ ರಚನೆಯ ಆಂತರಿಕ ಕಾರ್ಯತಂತ್ರವನ್ನು ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಕೇವಲ 8 ರಿಂದ 10 ಜನರಿಗೆ ಮಾತ್ರ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಮೊದಲ ಹಂತ ಮುಗಿದ ಸುಮಾರು 15 ದಿನಗಳ ಬಳಿಕ ಮತ್ತೊಂದು ಸುತ್ತಿನಲ್ಲಿ ಬಾಕಿ ಉಳಿದವರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಮೊದಲು ಮುಖ್ಯಮಂತ್ರಿಗಳು ಸಚಿವರಾಗಲಿರುವವರ ಪಟ್ಟಿಯನ್ನು ನೀಡಬೇಕಿದೆ. ಆ ಬಳಿಕವಷ್ಟೇ ಯಾರನ್ನು, ಎಷ್ಟು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದು ಅಂತಿಮವಾಗುತ್ತದೆ ಎಂದು ಅವರು ವಿವರಿಸಿದರು.ಜೂನ್ 3ರಂದು ದೆಹಲಿಯಲ್ಲಿ ನಡೆಯಲಿರುವ ಪ್ರಮುಖ ಸಭೆಯಲ್ಲಿ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now