ಸುದ್ದಿಒನ್, ಚಿತ್ರದುರ್ಗ, ಮೇ. 25 : ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಏಇಂ ನಡೆಸಿದ 2025 ರ K – CET ಪರೀಕ್ಷೆಯಲ್ಲಿ ಒಟ್ಟು 3,11,991 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ನಗರದ ಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ದಾಖಲೆ ನಿರ್ಮಿಸುವುದರೊಂದಿಗೆ ಚಿತ್ರದುರ್ಗ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ರೆಡ್ಡಿ ಬಿ 181ನೇ ರ್ಯಾಂಕ್, ಅಮರೇಶ್ 224ನೇ ರ್ಯಾಂಕ್ ನೊಂದಿಗೆ, ಒಟ್ಟು 500 ರ್ಯಾಂಕ್ ನೊಳಗೆ 10 ವಿದ್ಯಾರ್ಥಿಗಳು, 1000 ರ್ಯಾಂಕ್ ನೊಳಗೆ 16 ವಿದ್ಯಾರ್ಥಿಗಳು, 2000 ರ್ಯಾಂಕ್ ನೊಳಗೆ 18 ವಿದ್ಯಾರ್ಥಿಗಳು ಹಾಗೂ 5000 ರ್ಯಾಂಕ್ ನೊಳಗೆ 60 ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶದೊಂದಿಗೆ ದಾಖಲೆ ನಿರ್ಮಿಸಿದ್ದಾರೆ.
ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್, ಪ್ರಾಂಶುಪಾಲರಾದ ಶೇಖರ್ರೆಡ್ಡಿ, ಉಪ ಪ್ರಾಂಶುಪಾಲರಾದ ಶ್ರೀ. ಮನೋಹರ ಬಿ. ಹಾಗೂ ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂಧಿಯವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.