ಚಿತ್ರದುರ್ಗ, (ನ.24) : ನಗರದ ಐ.ಯು.ಡಿ.ಪಿ. ಲೇಔಟ್ನ ಆರನೇ ಕ್ರಾಸ್ ನಿವಾಸಿ ಶ್ರೀಮತಿ ಕೆ.ಗೌರಮ್ಮ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೊಳಗಾದಾಗ ಕೂಡಲೆ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು.
ಮೃತರು ಪತಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ಕುಮಾರ್ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಎಸ್.ಕೆ. ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ಸುಮಾರು 11-30 ಕ್ಕೆ ಸರ್ಕಾರಿ ಕಲಾ ಕಾಲೇಜು ಹಿಂಭಾಗವಿರುವ ಯಂಗಮ್ಮನಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.