Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ. ಹನುಮಯ್ಯ ನಿಧನ : ಕೇಂದ್ರ ಸಚಿವರ ಸಂತಾಪ

---Advertisement---

ಚಿತ್ರದುರ್ಗ, ಸೆಪ್ಟೆಂಬರ್.17 : ನಗರದ ಕೆಳಗೋಟೆ ವಾಸಿ ನಿವೃತ್ತ ಶಿಕ್ಷಕ ಕೆ. ಹನುಮಯ್ಯ (74ವರ್ಷ ) ಶನಿವಾರ ರಾತ್ರಿ 8:00 ಗಂಟೆಗೆ ನಿಧನರಾದರು. ಇವರು ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರ ಆಪ್ತ ಕಾರ್ಯದರ್ಶಿ ಮೋಹನ್ ಕುಮಾರ್‌ ಅವರ ತಂದೆ.

ಪತ್ನಿ, ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.‌ ಕೆಳಗೋಟೆಯ ನಿವಾಸದಲ್ಲಿ ಅಂತಿಮ ದರ್ಶನದ ನಂತರ ಅಂತ್ಯಕ್ರಿಯೆಯನ್ನು ಇಂದು (ಭಾನುವಾರ) ಅವರ ಸ್ವಗ್ರಾಮವಾದ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿಯಲ್ಲಿ ಮದ್ಯಾಹ್ನ 3 ಗಂಟೆಗೆ ನೆರವೇರಲಿದೆ‌ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರ ಸಂತಾಪ : ಕೆ.ಹನುಮಯ್ಯ ಅವರ ನಿಧನಕ್ಕೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಗಣ್ಯರ ಸಂತಾಪ : ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗದ ಶ್ರೀ ಶಾಂತವೀರ ಸ್ವಾಮೀಜಿ,  ಸೇರಿದಂತೆ ಜಿಲ್ಲೆಯ ಹಲವು  ಮಠಾಧೀಶರು ಶೋಕ ವ್ಯಕ್ತಪಡಿಸಿ ತೀವ್ರ ಭಗವಂತನು ಅವರ ನಿಧನದಿಂದ ದುಃಖಿತರಾಗಿರುವ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಎಂ.ಎಲ್.ಸಿ. ನವೀನ್, ಮಾಜಿ ಶಾಸಕ ಜಿ. ಹೆಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ,  ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment