ಚಿತ್ರದುರ್ಗ, ಸೆಪ್ಟೆಂಬರ್.17 : ನಗರದ ಕೆಳಗೋಟೆ ವಾಸಿ ನಿವೃತ್ತ ಶಿಕ್ಷಕ ಕೆ. ಹನುಮಯ್ಯ (74ವರ್ಷ ) ಶನಿವಾರ ರಾತ್ರಿ 8:00 ಗಂಟೆಗೆ ನಿಧನರಾದರು. ಇವರು ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರ ಆಪ್ತ ಕಾರ್ಯದರ್ಶಿ ಮೋಹನ್ ಕುಮಾರ್ ಅವರ ತಂದೆ.
ಪತ್ನಿ, ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಕೆಳಗೋಟೆಯ ನಿವಾಸದಲ್ಲಿ ಅಂತಿಮ ದರ್ಶನದ ನಂತರ ಅಂತ್ಯಕ್ರಿಯೆಯನ್ನು ಇಂದು (ಭಾನುವಾರ) ಅವರ ಸ್ವಗ್ರಾಮವಾದ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿಯಲ್ಲಿ ಮದ್ಯಾಹ್ನ 3 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವರ ಸಂತಾಪ : ಕೆ.ಹನುಮಯ್ಯ ಅವರ ನಿಧನಕ್ಕೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಗಣ್ಯರ ಸಂತಾಪ : ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗದ ಶ್ರೀ ಶಾಂತವೀರ ಸ್ವಾಮೀಜಿ, ಸೇರಿದಂತೆ ಜಿಲ್ಲೆಯ ಹಲವು ಮಠಾಧೀಶರು ಶೋಕ ವ್ಯಕ್ತಪಡಿಸಿ ತೀವ್ರ ಭಗವಂತನು ಅವರ ನಿಧನದಿಂದ ದುಃಖಿತರಾಗಿರುವ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಎಂ.ಎಲ್.ಸಿ. ನವೀನ್, ಮಾಜಿ ಶಾಸಕ ಜಿ. ಹೆಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…