ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ವಿಜಯ ಬ್ಯಾಂಕ್‍ನಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಕೆ.ಲೋಕೇಶ್ ಶಿವಸಾಲಿ(70) ಶುಕ್ರವಾರ ಬೆಳಿಗ್ಗೆ ಸ್ಟೇಡಿಯಂ ರಸ್ತೆ ಈಶ್ವರೀಯ ಕಲ್ಯಾಣ ಮಂಟಪದ ಸಮೀಪವಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಶುಕ್ರವಾರ ಸಂಜೆ ಮೃತರ ಅಂತ್ಯಕ್ರಿಯೆ ನಡೆಯಿತು.

