Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ.ಎಂ.ವೀರೇಶ್ ನಿಧನ : ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಸಂತಾಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಸೆ. 21 : ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ.ಕೆ.ಎಂ.ವೀರೇಶ್‍ರವರ ನಿಧನಕ್ಕೆ ಭೋವಿ ಅಭೀವೃದ್ದಿ ನಿಗಮ ಅಧ್ಯಕ್ಷರಾದ ಎಂ.ರಾಮಪ್ಪ ಸಂತಾಪ ಸೂಚಿಸಿ ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ನಗರದ ಜೆಸಿಆರ್ ಬಡಾವಣೆಯ ನಿವಾಸಿ, ಅ.ಭಾ.ಶ.ಸಾ.ಪ ರಾಜ್ಯ ಉಪಾಧ್ಯಕ್ಷರು, ಕಸಾಪ ಮಾಜಿ ಜಿಲ್ಲಾಧ್ಯಕ್ಷರು, ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ.ಕೆ.ಎಂ.ವೀರೇಶ್ (68) ಸೆ. 20ರ ಭಾನುವಾರ ರಂದು ರಾತ್ರಿ 9 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶಿಕ್ಷಣ ಪ್ರೇಮಿ, ಕಲಾ, ಸಾಹಿತ್ಯ, ಜನಾನುರಾಗಿ, ಸಂಸ್ಕೃತಿ ಚಿಂತಕರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನಗಳನ್ನು ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದರು. ಶರಣರ ನಡೆ-ನುಡಿಗಳನ್ನು ತಮ್ಮ ಉಸಿರಾಗಿಸಿಕೊಂಡು ಸಾಹಿತ್ಯ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. “ವೀರೇಶ್ ಅವರ ಸರಳತೆ, ಸಜ್ಜನಿಕೆ ಹಾಗೂ ಭಾಷಾ ಪ್ರೇಮ ಶಾಶ್ವತವಾದದ್ದು. . ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಜ್ಞಾನದ ದಾರಿಯಲ್ಲಿ ನೂರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರ ನಿಧನದಿಂದ ಕಲಾವಿದರು, ಅಭಿಮಾನಿಗಳು ಹಿತೈಷಿಗಳು ಹಾಗೂ ಕನ್ನಡ ಸಾಹಿತ್ಯ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ ಎಂದಿದ್ದಾರೆ.

ಶಿಕ್ಷಣ ಮತ್ತು, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆ ಮತ್ತು ನಿಸ್ವಾರ್ಥ ಸೇವೆ ಸದಾ ಸ್ಮರಣೀಯ. ಅವರ ಮಾರ್ಗದರ್ಶನ ಹಾಗೂ ದಕ್ಷ ನಾಯಕತ್ವ ನಾಡಿಗೆ, ವಿಶೇಷವಾಗಿ ಸಾಹಿತ್ಯ ಲೋಕಕ್ಕೆ ದೊಡ್ಡ ಶಕ್ತಿಯಾಗಿತ್ತು. ಅವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now