ಚಿತ್ರದುರ್ಗ, (ಜು.31) : ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ನಿವಾಸಿ ಕಂಟ್ರಾಕ್ಟರ್ ಕೆ.ನಾಗರಾಜ್ (65) ಸೋಮವಾರ ನಿಧನರಾದರು.
ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಪತ್ನಿ, ಪುತ್ರಿ, ಇಬ್ಬರು ಪುತ್ರರು, ಸಹೋದರರಾದ ಸಾಹಿತಿ ಡಾ.ಕಲಮರನಹಳ್ಳಿ ಮಲ್ಲಿಕಾರ್ಜುನ್, ಹಿರಿಯ ಪತ್ರಕರ್ತ ಕಾಂತರಾಜ್ ಅರಸು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸೋಮವಾರವೇ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆ ಮೃತರ ನಿವಾಸಕ್ಕೆ ಬಂಧುಗಳು, ಗಣ್ಯರು, ಜನಪ್ರತಿನಿಧಿಗಳು, ಸ್ನೇಹಿತರು ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.