ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 15 : ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ಎಸ್.ಬಿ.ಐ. ಲೈಫ್ ತಂಡ ಪಡೆದುಕೊಂಡಿತು. ಕೆಳಗೋಟೆ ಕಿಂಗ್ಸ್ ಎರಡನೆ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡರೆ ರಾಯಲ್ ಸೇನಾ ಮೂರನೆ ಬಹುಮಾನ ಧಕ್ಕಿಸಿಕೊಂಡಿತು.
ಕೆಳಗೋಟೆ ಕಿಂಗ್ಸ್ ತಂಡದ ಧನುಶ್ ಬೆಸ್ಟ್ ರೈಡರ್, ಎಸ್.ಬಿ.ಐ. ಲೈಫ್‍ನ ಆಕಾಶ್‍ಗೌಡ ಬೆಸ್ಟ್ ಕ್ಯಾಚರ್, ಎಸ್.ಬಿ.ಐ. ನ ಕಿರಣ್‍ಗೌಡ ಬೆಸ್ಟ್ ಆಲ್ ರೌಂಡರ್ ಆಗಿ ಪಂದ್ಯಾವಳಿಯಲ್ಲಿ ಹೊರಹೊಮ್ಮಿದರು.
ಜಯಶಾಲಿಗಳಿಗೆ ಆಕರ್ಷಕ ಕಪ್ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















