‘ಕೈಲಾಸ ಕಾಸಿದ್ರೆ’ ಟ್ರೇಲರ್ ರಿಲೀಸ್ : ಲವ್ವರ್ ಬಾಯ್ ಆದ್ರೂ ರವಿ

ಸುದ್ದಿಒನ್, ಬೆಂಗಳೂರು, ಫೆಬ್ರವರಿ.28 : ‘ಕೈಲಾಸ ಕಾಸಿದ್ರೆ’ ಟೈಟಲ್ ನಿಂದಾನೇ ಸಾಕಷ್ಟು ಕುತೂಹಲ ಹುಟ್ಟಿಸುವ ಸಿನಿಮಾ ಇದೀಗ ಟ್ರೇಲರ್ ರಿಲೀಸ್ ಮಾಡಿ ಆ ಕೌತುಕವನ್ನು ಮತ್ತಷ್ಟು ಹೆಚ್ಚಿಸಿದೆ. ನಾಗ್ ವೆಂಕಟ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಈ ದಿನಮಾನದ ಯುವ ಜನಾಂಗದ ಕಥೆಯನ್ನೊಳಗೊಂಡಿರುವ, ಎಲ್ಲ ಅಭಿರುಚಿಯ ಯುವ ಪ್ರೇಕ್ಷಕರನ್ನೂ ಕೂಡಾ ಆವರಿಸಿಕೊಳ್ಳುವ ಕಥೆ ಹೊಂದಿರುವ ಚಿತ್ರವೆಂಬ ವಿಚಾರವನ್ನ ಚಿತ್ರತಂಡವೇ ಜಾಹೀರು ಮಾಡಿತ್ತು.

ಈಗಾಗಲೇ ಹಾಡುಗಳ ಮೂಲಕ ಹಂತ ಹಂತವಾಗಿ ಸೆಳೆಯುತ್ತಾ ಸಾಗಿ ಬಂದಿರುವ ಈ ಸಿನಿಮಾದ ಟ್ರೈಲರ್, ಯುವ ಆವೇಗದ ಕಥೆಯೊಂದರ ಸ್ಪಷ್ಟ ಸುಳಿವಿನೊಂದಿಗೆ ಸೆಳೆದುಕೊಂಡಿದೆ. ಈ ಹಿಂದೆ ತಾರಕಾಸುರ ಚಿತ್ರದ ರಗಡ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಯವಾಗಿದ್ದವರು ರವಿ. ಚಿತ್ರವಿಚಿತ್ರ ಪಾತ್ರಗಳ ಮೂಲಕ ಅಚ್ಚರಿ ಮೂಡಿಸಿದ್ದ ರವಿ ಈ ಟ್ರೈಲರ್ ನಲ್ಲಿ ಲವರ್ ಬಾಯ್ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ.

ಇದೊಂದು ಇಂದಿನ ಯುವ ಜನಾಂಗದ ಒಳತೋಟಿಗಳ ಕಥೆ ಎಂಬುದನ್ನು ಸದರಿ ಟ್ರೈಲರ್ ಸಾಕ್ಷೀಕರಿಸಿದೆ. ವಯಸ್ಸಿನ ತುಮುಲಗಳಿಗೆ ವಶವಾಗಿ, ನಶೆಯ ಜಗತ್ತಿನೊಳಗೆ ಪ್ರವೇಶಿಸುವ ಯುವಕನೋರ್ವನ ಕಥಾ ಸಾರಾಂಶವನ್ನು ಧ್ವನಿಸುವಂತಿರುವ ಈ ಟ್ರೈಲರ್ ಅನ್ನು ನಾಗ್ ವೆಂಕಟ್ ಪರಿಣಾಮಕಾರಿಯಾಗಿ ರೂಪಿಸಿದ್ದಾರೆ.

ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ದರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ನ ಹೈಲೈಟ್ ಗಳಲ್ಲೊಂದು. ಇನ್ನುಳಿದಂತೆ ಒಂದು ಪಾತ್ರದ ಸುತ್ತಲೇ ನಿರೀಕ್ಷೆ ಮೊಳೆತುಕೊಳ್ಳುವಂಥಾ ಅಪರೂಪದ ಸೆಳೆತವೊಂದು ಈ ಟ್ರೈಲರ್ ನಲ್ಲಿ ಕಾಣಿಸುತ್ತದೆ. ಅದರ ಜೊತೆಜೊತೆಗೇ ದೃಷ್ಯ ಶ್ರೀಮಂತಿಕೆಯೂ ಸ್ಪಷ್ಟವಾಗಿ ಗೋಚರಿಸುವಂತಿದೆ.

ಮಾಸ್ ಮಾತ್ರವಲ್ಲದೇ ಭರಪೂರ ನಗುವಿಗೂ ಕೊರತೆಯೇನಿಲ್ಲ ಎಂಬ ನಿಖರ ಸಂದೇಶವೊಂದು ಈ ಟ್ರೈಲರ್ ಮೂಲಕವೇ ರವಾನೆಯಾದಂತೆ ಭಾಸವಾಗುತ್ತಿದೆ. ಅಂದಹಾಗೆ, ಇದೊಂದು ಕ್ರೈಂ ಕಾಮಿಡಿ ಜಾನರಿನ ಸಿನಿಮಾ ಎಂಬ ವಿಚಾರವನ್ನು ನಿರ್ದೇಶಕರು ಹೇಳಿಕೊಂಡಿದ್ದರು. ಅದಕ್ಕೆ ತಕ್ಕುದಾದ ಪುರಾವೆಗಳು ಟ್ರೈಲರ್ ನಲ್ಲಿ ಕಾಣಿಸಿವೆ. ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ. ವಾಸಿಕ್ ಅಲ್ಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸಾಫ್ಟ್‌ವೇರ್ ಜಗತ್ತಿನಿಂದ ಆಗಮಿಸಿರುವ ನಾಗ್ ವೆಂಕಟ್ ಚೊಚ್ಚಲ ನಿರ್ದೇಶನದ ಚಿತ್ರವಿದು. ಅವರು ಮೊದಲ ಹೆಜ್ಜೆಯಲ್ಲಿಯೇ ಗಟ್ಟಿ ಕಥೆಯೊಂದಿಗೆ ಪ್ರೇಕ್ಷಕರನ್ನು ಮುಖಾಮುಖಿ ಆಗಲಿದ್ದಾರೆಂಬುದಕ್ಕೂ ಈ ಟ್ರೈಲರ್ ಸಾಕ್ಷಿಯಂತಿದೆ. ಈಗಾಗಲೇ ಕೈಲಾಸ ಕಾಸಿದ್ರೆ ಚಿತ್ರ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿದೆ. ಇದೇ ಮಾರ್ಚ್ 8ನೇ ತಾರೀಕಿನಂದು ಈ ಸಿನಿಮಾ ತೆರೆಗಾಣಲಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago