Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲಬುರಗಿ : ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ KSRTC ಬಸ್ ಕಂಡಕ್ಟರ್ ಸಾವು!

---Advertisement---

ಕಲಬುರಗಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕೆಎಸ್ಆರ್ ಟಿಸಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ದುರಂತ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಡಿಪೋ-2ಗೆ ಸೇರಿದ ಬಸ್ ಕಲಬುರಗಿ-ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿತ್ತು. ಈ ವೇಳೆ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಯ್ಯ ಸ್ವಾಮಿ ಅವರಿಗೆ ಜೇವರ್ಗಿ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಇದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಸಿಬ್ಬಂದಿ ಹಾಗೂ ಪ್ರಯಾಣಿಕರು ತಕ್ಷಣ ಬಸ್ ನಿಲ್ಲಿಸಿ ಮಲ್ಲಯ್ಯ ಸ್ವಾಮಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಜೇವರ್ಗಿ ಡಿಪೋ-2 ವ್ಯವಸ್ಥಾಪಕ ಕೃಷ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now