Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬುನಾದಿ ಸಾಕ್ಷರತೆ, ಸಂಖ್ಯಾಜ್ಞಾನಕ್ಕೆ “ಕಲಿಕಾ ಪರ್ವ” ಕೈಗನ್ನಡಿ : ಬಿಇಒ ಎಸ್.ನಾಗಭೂಷಣ್

---Advertisement---

ಚಿತ್ರದುರ್ಗ. ಮೇ25 : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನವನ್ನು ಹೆಚ್ಚಿಸಲು ತಾಲ್ಲೂಕಿನಾದ್ಯಂತ ಏಕರೂಪವಾದ ಚಟುವಟಿಕೆಗಳನ್ನು ನಿರ್ವಹಿಸಲು “ಕಲಿಕಾ ಪರ್ವ” ಎಂಬ ಚಟುವಟಿಕೆಗಳ ಕೈಪಿಡಿ ಸಿದ್ಧಪಡಿಸಿದ್ದು, ಎಲ್ಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ಶಿಕ್ಷಕರಿಗೆ ಮಾಹಿತಿ ನೀಡಿ ಪರಿಣಾಮಕಾರಿಯಾಗಿ ಅನುಷ್ಠನಗೊಳಿಸಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಹೇಳಿದರು.

ನಗರದ ಹಳೇ ಮಾಧ್ಯಮಿಕ ಶಾಲೆಯ ಬಿಆರ್‍ಸಿ ಕೇಂದ್ರದ ಆವರಣದಲ್ಲಿ ಈಚೆಗೆ ನಡೆದ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಕುರಿತಾಗಿ ಚಿತ್ರದುರ್ಗ ತಾಲ್ಲೂಕಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ ಫಲಿತಾಂಶವು ಸಹ ಪ್ರಾಥಮಿಕ ಶಿಕ್ಷಣವನ್ನು ಅವಲಂಭಿಸಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಜವಾಬ್ದಾರಿಯನ್ನು ತಿಳಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಈ.ಸಂಪತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಆರ್‍ಪಿ ಕೆ.ಖಲಂದರ್ ಕ್ರಿಯಾಯೋಜನೆಯಲ್ಲಿನ ಅಂಶಗಳನ್ನು ವಿವರಿಸಿದರು. ಬಿಆರ್‍ಪಿ ವಿದ್ಯಾ ಸ್ವಾಗತಿಸಿದರು. ಬಿಆರ್‍ಪಿ ಷಾಹಿನ ಖಾನಂ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ  ಬಿ.ವಿಮಲಾಕ್ಷಿ, ಉಮೇಶಯ್ಯ, ವಾಸಂತಿ ಮತ್ತು ಎಲ್ಲಾ ಸಿಆರ್‍ಪಿಗಳು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment