Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಲುವೆಹಳ್ಳಿ ಪ್ರಕರಣ : ಸಹೋದರತ್ವ ಬೆಸೆಯುವ ಕೆಲಸವಾಗಬೇಕು : ಎನ್.ಡಿ.ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ನ. 04 :
ಅನೇಕ ವರ್ಷಗಳಿಂದಲೂ ಚಳ್ಳಕೆರೆ ತಾಲ್ಲೂಕಿನ ಕಾಲುವೆಹಳ್ಳಿಯಲ್ಲಿ ಅಸ್ಪøಶ್ಯತೆ ತಾಂಡವವಾಡುತ್ತಿದೆ. ಕ್ಷೌರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾದಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಕರಣ ದಾಖಲಾಗಿ ಎಂಟು ದಿನಗಳಾಗಿದ್ದರೂ ಪ್ರಮುಖ ಆರೋಪಿಗಳನ್ನು ಇನ್ನು ಬಂಧಿಸಿಲ್ಲ. ನೆಪ ಮಾತ್ರ ಕ್ಷೌರಿಕನೊಬ್ಬನನ್ನು ಪೊಲೀಸರು ಬಂಧಿಸಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹಿಂದುಳಿದ ವರ್ಗದ ಮುಖಂಡರಾದ ಎನ್.ಡಿ.ಕುಮಾರ್ ದೂರಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಈ ಬಗ್ಗೆ ಹೇಳಿಕೆಯನ್ನು ನೀಡಿದ ಅವರು, ಅನೇಕ ವರ್ಷಗಳಿಂದಲೂ ಕಾಲುವೆಹಳ್ಳಿಯಲ್ಲಿ ಅಸ್ಪøಶ್ಯತೆ ತಾಂಡವವಾಡುತ್ತಿದೆ. ಮಾದಿಗ ಸಮುದಾಯದ ಮೇಲೆ ನಡೆದ ದಬ್ಬಾಳಿಕೆಗೆ ಸಂಬಂಧಿಸಿದಂತೆ ನೆಪ ಮಾತ್ರಕ್ಕೆ ಒಬ್ಬನನ್ನು ಬಂಧಿಸಿ ಪ್ರಮುಖ ಆರೋಪಿಗಳಾದ ನಾಲ್ವರನ್ನು ಇನ್ನು ಬಂಧಿಸಿಲ್ಲ, ಮಾದಿಗರನ್ನು ನಾವು ಸಂಬಳಕ್ಕಿಟ್ಟುಕೊಂಡಿದ್ದೇವೆ. ಅವರುಗಳಿಗೆ ನೀವು ಯಾವುದೇ ಕಾರಣಕ್ಕೂ ಕ್ಷೌರ ಮಾಡಬಾರದೆಂದು ಬೆದರಿಕೆ ಹಾಕುತ್ತಿರುವ ನಾಯಕ ಜನಾಂಗದ ನಾಲ್ವರನ್ನು ಮೊದಲು ಬಂಧಿಸಬೇಕು. ಸಮನ್ವಯ ಸಮಿತಿ ರಚಿಸಿ ಕಾಲುವೆಹಳ್ಳಿಯಲ್ಲಿ ಸಹೋದರತ್ವ ಬೆಸೆಯುವ ಕೆಲಸವಾಗಬೇಕು. ಮಾದಿಗರು ಮತ್ತು ನಾಯಕ ಜನಾಂಗದರು ಅಣ್ಣ-ತಮ್ಮಂದಿರಂತೆ ಬದುಕುವುದು ನಮಗೆ ಬೇಕಾಗಿದೆ ಎಂದಿದ್ದಾರೆ.

ಕ್ಷೌರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾದಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಕರಣ ದಾಖಲಾಗಿ ಎಂಟು ದಿನಗಳಾಗಿದ್ದರೂ ಪ್ರಮುಖ ಆರೋಪಿಗಳನ್ನು ಇನ್ನು ಬಂಧಿಸಿಲ್ಲ. ನೆಪ ಮಾತ್ರ ಕ್ಷೌರಿಕನೊಬ್ಬನನ್ನು ಪೊಲೀಸರು ಬಂಧಿಸಿ ನಿರ್ಲಕ್ಷೆ ವಹಿಸಿದ್ದಾರೆ. ಸವಿತಾ ಸಮಾಜವನ್ನು ಎಸ್‍ಸಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಇದರಿಂದ ಸಮಾಜಕ್ಕೆ ಅನುಕೂಲ ಹಾಗೂ ಭದ್ರತೆ ಸಿಗಲಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment