Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ

---Advertisement---

ಬೆಂಗಳೂರು. ಸೆಪ್ಟೆಂಬರ್. 16:  ಸೆಪ್ಟೆಂಬರ್ 17ರ ನಾಳೆ ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಟಿ. ರಘುಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಅಧಿಕೃತ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು 7 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರವು ಉಸ್ತುವಾರಿ ಸಚಿವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಈ ಕುರಿತು ಅಧಿಕೃತ ಆದೇಶ ನೀಡಿದ್ದು, ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಜಿಲ್ಲಾವಾರು ಸಚಿವರ ವಿವರ:

ಕಲಬುರಗಿ: ಶ್ರೀ ಪ್ರಿಯಾಂಕ್ ಖರ್ಗೆ (ಗೃಹ ಮತ್ತು ಐಟಿ-ಬಿಟಿ ಸಚಿವರು)

ಬೀದರ್: ಶ್ರೀ ಈಶ್ವರ್ ಖಂಡ್ರೆ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು)

ಯಾದಗಿರಿ: ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ (ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು)

ಕೊಪ್ಪಳ: ತಂಗಡಗಿ ಶಿವರಾಜ್ ಸಂಗಪ್ಪ (ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು)

ಬಳ್ಳಾರಿ: ಟಿ. ರಘುಮೂರ್ತಿ (ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು)

ರಾಯಚೂರು: ಡಾ. ಅಜಯ್ ಸಿಂಗ್ (ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರು)

ವಿಜಯನಗರ: ಕೆ. ಎಸ್. ಬಸವಂತಪ್ಪ (ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು)

ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

Join WhatsApp

Join Now

Join Telegram

Join Now