Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳೆ ಜೊತೆಗೆ ಕಮಾಲಕರ ಭಟ್ ಗುರೂಜಿ ಸಂಬಂಧ : ಒಂದು ಸಾವು.. ಇಬ್ಬರು ಗಂಭೀರ..!

---Advertisement---

ಕಾರವಾರ: ಮಹಿಳೆ ಜೊತೆಗೆ ಕಮಾಲಕರ ಭಟ್ ಗುರೂಜಿ ಅಕ್ರಮ ಸಂಬಂಧ ಹೊಂದಿದ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕೊಲೆಯೇ ನಡೆದಿದೆ. ಈ ಘಟನೆ ನಡೆದಿರೋದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ. ಈಗಾಗಲೇ ಪೊಲೀಸರು ಗುರೂಜಿ ಸೇರಿದಂತೆ ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಸುಚಿತ್ರಾ ಎಂಬ ಮಹಿಳೆ ಸಂಬಂಧ ಹೊಂದಿದ್ದರಂತೆ. ಈ ವಿಚಾರ ಸುಚಿತ್ರಾ ಅವರ ಮಗಳಿಗೆ ಗೊತ್ತಾಗಿದೆ. ವಿಚಾರ ತಿಳಿದ ಕೂಡಲೇ ಪುತ್ರಿ ತಮ್ಮ ತಂದೆಗೆ ವಿಷಯ ತಿಳಿಸಿದ್ದಾಳೆ. ಸುಚಿತ್ರಾ ಪತಿ ಮಹೇಶ್ ನಾಯ್ಕ್ ನೇರವಾಗಿ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಇದಾದ ಬಳಿಕ ಹಲ್ಲೆ ನಡೆದಿದೆ. ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಹಲ್ಲೆ ನಡೆದಿದೆ. ಅದರಲ್ಲಿ ವಸಂತ್ ನಾಯ್ಕ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಇನ್ನುಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ನಡೆದ ತಕ್ಷಣ ಗುರೂಜಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಗುರೂಜಿ ಸೇರಿದಂತೆ ಏಳು ಜನರನ್ನು ಅರೆಸ್ಟ್ ಮಾಡಿದ್ದಾರೆ.‌ ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್ ಸ್ವಾಮೀಜಿ ಆಗಿದ್ದಾರೆ. ಸದ್ಯ ಎಲ್ಲರೂ ಪೊಲೀಸರ ಅತಿಥಿಯಾಗಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now