Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋ ಶಾಲೆ, ಮಠದ ಹೆಸರಲ್ಲಿ ಕೋಟಿ ಕೋಟಿ ಆಸ್ತಿ ಮಾಡಿದ್ದ ಕಮಲಾಕರ್ ಭಟ್..!

---Advertisement---

ಶಿವಮೊಗ್ಗ: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಮಲಾಕರ್ ಭಟ್ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತನಿಖೆಯ ನಡುವೆ ಆತನ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ಆಧ್ಯಾತ್ಮಿಕತೆಯ ಹೆಸರಲ್ಲಿ ಬೇಜಾನ್ ಬೇನಾಮಿ ಆಸ್ತಿ ಮಾಡಿರೋದು ಬೆಳಕಿಗೆ ಬಂದಿದೆ.

ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದಲ್ಲಿ ಕಮಲಾಕರ್ ಭಟ್ ಬರೋಬ್ಬರಿ 10 ಎಕರೆ ಜಮೀನನ್ನ ಹೊಂದಿದ್ದಾನಂತೆ. ಸುಮಾರು ಐದು ವರ್ಷಗಳ ಹಿಂದೆಯೇ ಈ ಜಮೀನನ್ನು 3.5 ಕೋಟಿ ರೂಪಾಯಿ ನೀಡಿ ಖರೀದಿಸಲಾಗಿತ್ತನಮತರ. ಸದ್ಯ ಈ ಜಮೀನಿನ ಮಾರುಕಟ್ಟೆ ಮೌಲ್ಯ ಸುಮಾರು 6 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಆ ಜಾಗದಲ್ಲಿ ಗೋ ಶಾಲೆಯನ್ನು ಮತ್ತು ಮಠವನ್ನು ಕಟ್ಟೋದಾಗಿ ಹೇಳಿದ್ದರಂತೆ. ಜನರ ಭಾವನೆಗಳಿಗೆ ಖುಷಿ ಕೊಡೋದಕ್ಕೆ ಆರಂಭದಲ್ಲಿ ಗೋಶಾಲೆಯನ್ನು ನಿರ್ಮಿಸಿದ್ದನಂತೆ. ಈ ಬಗ್ಗೆ ಸ್ಥಳೀಯರೇ ಮಾಹಿತಿ ನೀಡಿದ್ದಾರೆ.

ಅದಾದ ಮೇಲೆ ಆ ಗೋಶಾಲೆಯನ್ನು ಮುಚ್ಚಿ ಅಲ್ಲಿ ಕೇವಲ ಹೋಮ, ಹವನ, ಜ್ಯೋತಿಷ್ಯ ಹೇಳುವುದಕ್ಕಷ್ಟೇ ಆ ಜಾಗವನ್ನ ಬಳಕೆ ಮಾಡಿಕೊಳ್ಳುತ್ತಿದ್ದನಂತೆ. ಅತ್ತ ಸುಚಿತ್ರಾಗೆ ಐಷರಾಮಿ ಜೀವನವನ್ನೇ ನೀಡಿದ್ದ ಎಂಬ ಮಾಹಿತಿಯೂ ಸಿಕ್ಕಿದೆ. ಮಾರುಕಟ್ಟೆಗೆ ಹೊಸದಾಗಿ ಬಂದಿದ್ದ ಕಾರು, ರಾಯಲ್ ಎನ್ ಫೀಲ್ಡ್ ಬೈಕು ಹೀಗೆ ಎಲ್ಲವನ್ನು ಕೊಟ್ಟ ರಾಯಲ್ ಆಗಿ ಬದುಕುವಂತೆ ನೋಡಿಕೊಂಡಿದ್ದನಂತೆ. ಸುಚಿತ್ರಾಗೆ ರೀಲ್ಸ್ ಗೀಳು ಜಾಸ್ತಿ. ಕಮಲಾಕರ್ ಭಟ್ ಕೊಡಿಸಿದ್ದ ಕಾರಿನಲ್ಲಿಯೇ ಕೂತು ಹೆಚ್ಚು ರೀಲ್ಸ್ ಮಾಡುತ್ತಿದ್ದಳು. ಈಗ ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದಾವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now