ಚಿತ್ರದುರ್ಗ. ನ.18: ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಪುತ್ಥಳಿಗೆ ಹಾಗೂ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಕುವ ಮೂಲಕ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಗೊರವರ ಕುಣಿತ, ಕಹಳೆ ನಾದ, ಡೊಳ್ಳು ಕುಣಿತ, ಕರಡಿ ಚಮ್ಮಳ, ತಮಟೆ ವಾದ್ಯ, ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭವಾದ ಮೆರವಣಿಗೆಯು ಸಂಗೋಳ್ಳಿ ರಾಯಣ್ಣ ವೃತ್ತ, ಗಾಯತ್ರಿ ಸರ್ಕಲ್, ಗಾಂಧಿವೃತ್ತ, ಎಸ್ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…