Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ವಾಸವಿ ವಿದ್ಯಾ ಸಂಸ್ಥೆಯಲ್ಲಿ “538ನೇ ಕನಕದಾಸ ಜಯಂತಿ ಆಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 08 : ದಾಸ ಶ್ರೇಷ್ಠ ಕನಕದಾಸರ 538ನೇ ಜಯಂತಿಯನ್ನು ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಸರಳ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಸವಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಲ್. ಎನ್. ಅಜಯ್ ಕುಮಾರ್ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕನಕ ದಾಸರ ಭಕ್ತಿ ಪರವಶತೆ ಸಾಮಾಜಿಕ ಕಳಕಳಿ ಯನ್ನು ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾಗಿರುವಂತಹ ನಾಗೇಶ್ ರವರು ಹಾಗೂ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಗೋಪಾಲಕೃಷ್ಣರವರು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಶ್ರೀಮತಿ ಭಾಗ್ಯ ಕನಕದಾಸರ ಜೀವನ ವೃತ್ತಾಂತವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯನಿ ಶ್ರೀಮತಿ ರಾಧಾಮಣಿ ರವರೊಂದಿಗೆ ವಿದ್ಯಾಸಂಸ್ಥೆಯ ಸಕಲ ಶಿಕ್ಷಕ ವೃಂದದವರು ದಾಸರ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು ಎಲ್.ಎನ್. ಅಜಯ್ ಕುಮಾರ್, ನಿರ್ದೇಶಕರಾದ ಎಂ.ಜಿ ನಾಗೇಶ್ ಹಾಗೂ ಮುಖ್ಯೋಪಾಧ್ಯಾಯ ಅಶೋಕ್ ಎಟಿ, ಚನ್ನಬಸಪ್ಪಬಸಪ್ಪ ಹಾಗೂ ಶ್ರೀಮತಿ ರಾಧಾಮಣಿ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಾ ಜೋಶಿ ಪ್ರಾರ್ಥನೆ ಸಲ್ಲಿಸಿದರು. ಶ್ರೀಮತಿ ಉಷಾ ನಾಗೇಶ್ ಸ್ವಾಗತ ಕೋರಿದರು.ಶ್ರೀಮತಿ ಸೌಮ್ಯ ಎ. ಎಸ್ ವಂದನಾರ್ಪಣೆ ಸಲ್ಲಿಸಿದರು ಹಾಗೂ ಶ್ರೀಮತಿ ದಿವ್ಯ ರವರು ನಿರೂಪಣೆಯನ್ನು ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...