Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಣಿವೆಮಾರಮ್ಮನ ಜಾತ್ರೆ ಆರಂಭ : ರಾಜಬೀದಿಗಳಲ್ಲಿ ಸಾಗಿದ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 20 : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನ ಜಾತ್ರೆ ಆರಂಭಗೊಂಡಿದ್ದು, ಗುರುವಾರ ಬೆಳಿಗ್ಗೆ ಅಲಂಕೃತ ಸಾರೋಟಿನಲ್ಲಿ ಕಣಿವೆಮಾರಮ್ಮನ ಮೆರವಣಿಗೆ ರಾಜಬೀದಿಗಳಲ್ಲಿ ಸಾಗಿತು.

ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಉಮೇಶ್‍ಬಾಬುರವರು ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಬಗೆಯ ಹೂವು ಹಾಗೂ ಹಾರಗಳಿಂದ ಸಿಂಗರಿಸಿದ್ದ ಕಣಿವೆಮಾರಮ್ಮನ ಮೆರವಣಿಗೆ ಮದಕರಿವೃತ್ತದ ಮೂಲಕ ಕರುವಿನಕಟ್ಟೆ ಸರ್ಕಲ್, ಏಕನಾಥೇಶ್ವರಿ ಪಾದಗುಡಿ, ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗ, ಆನೆಬಾಗಿಲಿನಿಂದ ದೇವಸ್ಥಾನ ತಲುಪಿತು.

ಡೊಳ್ಳು ಕುಣಿತ, ತಮಟೆ, ಸೋಮನಕುಣಿತ, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿದ್ದರು. ಸೈಬರ್ ಕ್ರೈಂ ಡಿ.ವೈ.ಎಸ್ಪಿ. ಉಮೇಶ್ ಈಶ್ವರ್‍ನಾಯ್ಕ, ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್ಪಿ. ಗಣೇಶ್ ಸೇರಿದಂತೆ ನಿವೃತ್ತ ಪೊಲೀಸ್ ಅಧಿಕಾರಿಗಳು ಮೆರವಣಿಗೆ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...