ಕನ್ನಡ ಭಾಷೆ ಕೊಂಚ ಎಲ್ಲೋ ಮಾಯವಾಗುವಂತೆ ಕಾಣುತ್ತಿದೆ ಎಂಬ ಅಭಿಪ್ರಾಯ ಆಗಾಗ ಕಾಣಿಸುತ್ತಲೆ ಇದೆ. ಜೊತೆಗೆ ಕನ್ನಡಿಗರ ನೆಲದಲ್ಲಿ ಕೆಲಸದ ವಿಚಾರದಲ್ಲಿ ಕನ್ನಡಿಗರಿಗೆ ಅವಕಾಶ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು, ಕಾಪಾಡಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡ ಶ್ರಮ ಹಾಕುತ್ತಿದೆ. ಇದೀಗ ಇಂದು ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಮಂಡನೆ ಮಾಡಿದೆ. ವಿಧಾನಸಭೆಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದ್ದು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ಕೊಡುವ ವಿಧೇಯಕವಾಗಿದೆ. ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ ಮಂಡನೆ. ಒಂದೇ ವಿಷಯದ ಶಿಕ್ಷಕರು ಪರಸ್ಪರ ವರ್ಗಾವಣೆಗೆ ಅವಕಾಶ ಕೊಡುವ ವಿಧೇಯಕವಾಗಿದೆ.
ಈ ವಿಧೇಯಕದ ಪ್ರಕಾರ, ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರಿಗೆ ಉನ್ನತ ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿಗೆ ಅವಕಾಶ ನೀಡಲಾಗುವುದು. ಅಧೀನ ನ್ಯಾಯಾಲಯ, ನ್ಯಾಯಾಧೀಕರಣ ಮತ್ತು ಇತರೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲಾಗುವುದು. ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಕೈಗಾರಿಕಾ ಸಂಸ್ಥೆಗಳಿಗೆ ತೆರಿಗೆ ರಿಯಾಯಿತಿ, ಕನ್ನಡ ಅನುಷ್ಠಾನದ ಮೇಲ್ವಿಚಾರಣೆಗೆ ಸಮಿತಿ ಸ್ಥಾಪನೆಗೆ ಅವಕಾಶ ಕೊಡುವ ವಿಧೇಯಕ ಇದಾಗಿದೆ. ನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಅನುಕೂಲವಾಗುತ್ತದೆ. ಜೊತೆಗೆ ಬೇರೆ ಅನ್ಯ ಭಾಷಿಗರ ದಬ್ಬಾಳಿಕೆಯನ್ನು ಇದರಿಂದ ತಪ್ಪಿಸಬಹುದಾಗಿದೆ.
ಇನ್ನು ಈ ವಿಧೇಯಕದ ಬಗ್ಗೆ ಆಳವಾಗಿ ಅಧಯಯನ ನಡೆಸಿ, ಚರ್ಚಿಸಿ ಈ ವಿಧೇಯಕ ಕರಡನ್ನು ಸಿದ್ಧಪಡಿಸಿದೆ. ಕನ್ನಡ ಭಾಷೆ ಅಭಿವೃದ್ಧಿಗಾಗಿ ಕಾನೂನು ಆಯೋಗ ಹಮ್ಮಿಕೊಂಡಿರುವ ಈ ಕಾರ್ಯ ಶ್ರೇಷ್ಠ ಹಾಗೂ ಸಮಯೋಚಿತವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕೂಡ ಹೇಳಿದ್ದಾರೆ. ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವೀಚಾರಣೆಗೆ ಅಧಿಕಾರ ನೀಡಲಾಗುವುದು. ಉಲ್ಲಂಘನೆ ಮಾಡಿದ್ದಲ್ಲಿ ದಂಡವನ್ನು ವಿಧಿಸಬಹುದು. ಮೊದಲನೇ ಸಲ ತಪ್ಪು ಮಾಡಿದರೆ ಐದು ಸಾವಿರ, ಎರಡನೇ ಸಲ 10 ಸಾವಿರ, ಮೂರನೇ ಸಲ ತಪ್ಪು ಮಾಡಿದರೆ 20 ಸಾಔಇರ ದಂಡ ವಿಧಿಸಬಹುದಾಗಿದೆ.