ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ಮಾರ್ಚ್ 27 ಮತ್ತು 28 ರಂದು ಹೊಳಲ್ಕೆರೆಯಲ್ಲಿ ಜರುಗಲಿರುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮತ್ತು ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಗುರುವಾರ ಬಿಡುಗಡೆಗೊಳಿಸಿದರು.

ಮಾ.27 ರಂದು ಬೆಳಗ್ಗೆ 8 ಗಂಟೆಗೆ ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧದ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಲಿದೆ. ರಾಷ್ಟಧ್ವಜವನ್ನು ಶಾಸಕ ಎಂ.ಚಂದ್ರಪ್ಪ, ಸಾಹಿತ್ಯ ಪರಿಷತ್ತಿನ ಧ್ವಜವನ್ನು ತಾಲ್ಲೂಕು ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ನೆರವೇರಿಸಲಿದ್ದಾರೆ. 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣೆಗೆ ಮತ್ತು ಕಲಾತಂಡಗಳ ಮೆರವಣಿಗೆ ಜರುಗಲಿದೆ. ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಜಿ.ಸೋಮಶೇಖರ್, ಮತ್ತು ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಭಂಡಾರು ಚಾಲನೆ ನೀಡಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಸೇರಿದಂತೆ ಪುರಸಭೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಸ್ತುವಾರಿ ಸಚಿವ ಡಿ.ಸುಧಾಕರ್ ಮೆರವಣಿಗೆ ನಂತರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಸಾಪ ರಾಜ್ಯಧ್ಯಕ್ಷ ನಾಡೋಜ ಮಹೇಶ ಜೋಶಿ ಸೇರಿದಂತೆ ಜಿಲ್ಲೆಯ ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶಿರಹಟ್ಟಿ ಬಾಳೆಹೊಸೂರು ಭಾವೈಕ್ಯ ಸಂಸ್ಥಾನದ ದಿಂಗಾಲೇಶ್ವರ ಸ್ವಾಮೀಜಿ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಎರಡು ದಿನಗಳ ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಸಾಹಿತ್ಯ, ಸಂಸ್ಕøತಿ, ಕೃಷಿ ಮತ್ತು ಶಿಕ್ಷಣಕ್ಕೆ ಸೇರಿದಂತೆ ನಾನಾ ಗೋಷ್ಠಿಗಳು ಜರುಗಲಿವೆ.

ಪ್ರಚಾರ ಸಾಮಗ್ರಿ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ, ಚಿತ್ರದುರ್ಗ ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್, ಜಿಲ್ಲಾ ಕಾರ್ಯದರ್ಶಿ ಮಳಲಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ, ಖಜಾಂಚಿ ಸಿ.ಲೋಕೇಶ, ಉಪನ್ಯಾಸಕ ದೊಡ್ಡಯ್ಯ, ಹೊಳಲ್ಕೆರೆಯ ದೇವರಾಜ್, ರೇವಣಸಿದ್ದಪ್ಪ ಮತ್ತಿತರರಿದ್ದರು.


