Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 16ಕ್ಕೆ ಚಿತ್ರದುರ್ಗದಲ್ಲಿ ‘ಕನ್ನಡ ನಿತ್ಯೋತ್ಸವ ರಸಮಂಜರಿ’: ಡಾ. ವಿಷ್ಣು, ಎಸ್. ಜಾನಕಿ ನೆನಪಿನಲ್ಲಿ ಅದ್ಧೂರಿ ಕಾರ್ಯಕ್ರಮ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ.03 : ಕರುಣಾಮಯಿ ಸಾಂಸ್ಕೃತಿಕ ಕಲಾ ವೇದಿಕೆ, ಬಂಜಾರ ಸಮಾಜ ಚಲನಚಿತ್ರ ಪೋಷಕ ಕಲಾವಿದರು ಬೆಂಗಳೂರು ಇವರು ಡಾ,ವಿಷ್ಣು ಹಾಗೂ ಎಸ್.ಜಾನಕಿಯವರ ಸವಿನೆನಪು ಅಂಗವಾಗಿ ಚಿತ್ರದುರ್ಗದ ಚಲನಚಿತ್ರ ನಟ-ನಟಿಯರಿಂದ ಕಾರ್ಯಕ್ರಮ ಕನ್ನಡ ನಿತ್ಯೋತ್ಸವ ರಸಮಂಜರಿ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದವರಿಗೆ ಸನ್ಮಾನವೂ ಆ, 16ರ ಭಾನುವಾರ ಸಂಜೆ 6 ಗಂಟೆಗೆ ನಗರದ ಮಹರ್ಷಿ ವಾಲ್ಮಿಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಸಮಾಜದ ಜಿಲ್ಲಾಧ್ಯಕ್ಷರಾದ ಎಂ ಸತೀಶ್ ಕುಮಾರ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಹಾಗೂ ಗಾನ ಕೋಗಿಲೆ ಎಸ್.ಜಾನಕಿ ಅಮ್ಮನವರ ಸವಿ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಇದರಲ್ಲಿ ಜೂನಿಯರ್ ಕಲಾವಿದರಾದ ಪುನಿತ್ ರಾಜಕುಮಾರ್, ರವಿಚಂದ್ರನ್, ಅಂಬರೀಷ್, ಹಾಗೂ ಜಿ.ಕನ್ನಡದ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಸಂಘಟಕರಾದ ಜಾಕಿರ್ ಮಾತನಾಡಿ ಈ ಕಾರ್ಯಕ್ರಮದಲ್ಲಿ ನಮ್ಮ ದುರ್ಗದ ಜನತೆಗೆ ಏನಾದರೂ ಕಾರ್ಯಕ್ರಮ ನೀಡಬೇಕೆಂದು ಈ ರಸಮಂಜರಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇದರಲ್ಲಿ ಡಾ.ವಿಷ್ಣುವರ್ಧನ ರವರ ನೆನಪು ಹಾಗೂ ಎಸ್.ಜಾನಕಿಯವರ ಹಾಡುಗಳನ್ನು ಹಾಡಲಾಗುವುದು ಇದ್ದಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದವರನ್ನು ಗುರುತಿಸಿ ಕನ್ನಡ ರತ್ನ, ಕರ್ನಾಟಕ ರತ್ನ, ಕನ್ನೆ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾಮ ಚುನಾಯಿತ ಪ್ರತಿನಿಧಿಗಳನ್ನು ಜಾತಿ, ಧರ್ಮ, ಪಕ್ಷವನ್ನು ಬಿಟ್ಟು ಕಲಾ ಸೇವೆಯ ಹಿನ್ನಲೆಯಲ್ಲಿ ಆಹ್ವಾನ ಮಾಡಲಾಗುವುದು ಎಂದರು.

ಗೋಷ್ಟಿಯಲ್ಲಿ ಟಿಪ್ಪು ಸುಲ್ತಾನ್ ವೇದಿಕೆಯ ಅಧ್ಯಕ್ಷರಾದ ಟಿಪ್ಪು ಖಾಸಿಂ ಆಲಿ, ಮಹಮ್ಮದ್ ಆಲಿ ಹಾಗೂ ಸೈಯದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now