ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 09 : ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಿರಬಾರದು, ಪ್ರತಿಯೊಬ್ಬರ ದಿನನಿತ್ಯದ ಬದುಕಿನಲ್ಲಿ ಕನ್ನಡ ಬಳಕೆಯಾದಾಗ ಮಾತ್ರ ಕನ್ನಡ ರಾಜ್ಯೋತ್ಸವಕ್ಕೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ನವ ಕ್ರಾಂತಿ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರದೀಪ್‍ಕುಮಾರ್ ತಿಳಿಸಿದರು.
ನವ ಕ್ರಾಂತಿ ರಕ್ಷಣಾ ವೇದಿಕೆ ಕಚೇರಿಯಲ್ಲಿ ಕನ್ನಡಾಂಭೆ ಹಾಗೂ ಸಂವಿದಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ
ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಎಲ್ಲರೂ ಅಭಿಮಾನ ಮೂಡಿಸಿಕೊಳ್ಳಬೇಕು. ಅದೇ ರೀತಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕೆಂದು ಹೇಳಿದರು.ನವ ಕ್ರಾಂತಿ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಮಹಾಂತೇಶ್, ಜಿಲ್ಲಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ, ಹನುಮಂತರಾಯ, ಬಾಗೋಡಿ ಸ್ವಾಮಿ
ನಗರಾಧ್ಯಕ್ಷ ಮಂಜುನಾಥ್ ಟಿ.ಎನ್. ಸತೀಶ್, ಶ್ರೀಧರ್, ಕಿರಣ್‍ಕುಮಾರ್, ವಿನಯ್‍ಕುಮಾರ್, ತಿಪ್ಪೇಶ್ ಹಾಗೂ ವೇದಿಕೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್