ಸುದ್ದಿಒನ್, ಚಿತ್ರದುರ್ಗ. ನ.17, ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘದ ವತಿಯಿಂದ ನವೆಂಬರ್ 19 ರಂದು ಕನ್ನಡ ರಾಜ್ಯೋತ್ಸವ ಸಂಭ್ರಮ ಆಯೋಜಿಸಲಾಗಿದೆ.
ನಗರದ ಗಾಯತ್ರಿ ಶಿವರಾಂ ಇನ್ನರ್ ವ್ಹೀಲ್ ಭವನ, ಧವಳಗಿರಿ ಬಡಾವಣೆಯಲ್ಲಿ ಸಂಜೆ 5-30 ಗಂಟೆಗೆ ಇನ್ನರ್ ವ್ಹೀಲ್ ಕ್ಲಬ್ ಹಾಗೂ ವಾಸವಿ ಕ್ಲಬ್ ಇವರುಗಳ ಸಹಯೋಗದೊಂದಿಗೆ ಗಮಕ ಕಲಾಭಿಮಾನಿಗಳ ಸಂಘ ಸ್ಥಾಪನೆಯಾಗಿ 40 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಕನ್ನಡ ಗೀತೆಗಳೊಂದಿಗೆ, ಹರಿದಾಸ ಕೀರ್ತನೆಗಳು, ವಚನಗಳು ಮುಂತಾದುವುಗಳ ಗಾಯನವಿರುತ್ತದೆ.
ಈ ನುಡಿ ರಥೋತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು
ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















