ನಟ ದರ್ಶನ್ ಇತ್ತಿಚೆಗೆ ಎರಡು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇವತ್ತು ಇವಳಿರುತ್ತಾಳೆ.. ನಾಳೆ ಅವಳಿರ್ತಾಳೆ ಎಂಬ ಹೇಳಿಕೆಗಳನ್ನು ನೀಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ. ಇದು ಮಹಿಳಾ ಕುಲಕ್ಕೆ ಮಾಡಿದ ಅವಮಾನವೆಂದು ಮಹಿಳೆಯರು ರೊಚ್ಚುಗೆದ್ದು ದೂರು ನಿಡೀದ್ದಾರೆ. ಇನ್ನು ಕಾಟೇರ ಸಕ್ಸಸ್ ದಿನ ನಿರ್ಮಾಪಕ ಉಮಾಪತಿ ಅವರ ಬಗ್ಗೆ ಮಾತನಾಡಿದ ದರ್ಶನ್, ತಗಡೇ ಎಂಬ ಪದ ಬಳಕೆ ಮಾಡಿದ್ದರು. ಈ ವಿಚಾರಕ್ಕೆ ಕನ್ನಡ ಶಫಿ ಅವರು ದೂರು ನೀಡಿದ್ದರು.
ನಿರ್ಮಾಪಕ ಉಮಾಪತಿ ಅವರನ್ನು ದರ್ಶನ್ ನಿಂದಿಸಿದ್ದಾರೆ ಎಂದು ಆರೋಪಿಸಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಇದೀಗ ಆ ದೂರನ್ನು ಹಿಂಪಡೆದಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಕ್ಷಮೆಯನ್ನು ಯಾಚಿಸಿದ್ದಾರೆ. ದರ್ಶನ್ ಅಭಿಮಾನಿಗಳ ಕ್ಷಮೆ ಕೇಳಿದ ಕನ್ನಡ ಶಫಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಫಿ ಮಾಡಿರುವ ವಿಡಿಯೋದಲ್ಲಿ ಏನಿದೆ..?: ಎಲ್ಲರಿಗೂ ನಮಸ್ಕಾರ. ನಾನು ಕನ್ನಡ ಶಫಿ. ಇವತ್ತು ನಾನು ನಿಮ್ಮ ಮುಂದೆ ಬಂದಿರುವ ಉದ್ದೇಶ ಏನು ಅಂದ್ರೆ, ದರ್ಶನ್ ಅವರು ವೇದಿಕೆ ಮೇಲೆ ಬಳಸಿದ್ದ ಪದಗಳು ಮುಜುಗರ ಉಂಟು ಮಾಡಿತ್ತು. ಹಾಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದೆವು. ದರ್ಶನ್ ಹಿರಿಯ ನಟ. ನಾವೂ ದೂರು ನೀಡಬಾರದಿತ್ತು. ಯಾಕೋ ಸ್ವಲ್ಪ ಆತುರ ಪಟ್ಟೆವು ಎನಿಸಿತು. ಹೀಗಾಗಿ ನನ್ನಿಂದ ದರ್ಶನ್ ಅವರಿಗಾಗಲಿ, ಕನ್ನಡಿಗರಿಗಾಗಲೀ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ವಿಡಿಯೋ ಮೂಲಕ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…